ಬಳ್ಳಾರಿ: ಸದನವನ್ನು ನಡೆಸಲು ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸುತ್ತಿದ್ದಾರೆ. ಇದನ್ನು ಜನರಿಗೆ ತಿಳಿಸಿ. ಮತ್ತೊಮ್ಮೆ ಜನರಿಂದ ಆಶೀರ್ವಾದ ಪಡೆಯಲು ಈ ಯಾತ್ರೆಯನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದ ಕನಕದುರ್ಗಮ್ಮ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ನಂತರ ಅವರು ಸುದ್ದಿಗಾರೊಂದಿಗೆ ಮಾತನಾಡಿದರು. ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ನಡೆಸಲಾಗುತ್ತಿದೆ. ಸರ್ಕಾರದ ಸಾಧನೆಗಳು ಹಾಗೂ ಕಾಂಗ್ರೆಸ್ ಸದನದಲ್ಲಿ ಅಡ್ಡಿಪಡಿಸಿದ ಕಾರಣಗಳನ್ನು ಜನಾಶೀರ್ವಾದ ಯಾತ್ರೆಯಲ್ಲಿ ತಿಳಿಸಲಾಗುವುದು ಎಂದರು.
ಯಾದಗಿರಿಯಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಬಂದೂಕಿನಲ್ಲಿ ಗುಂಡುಹಾರಿಸಿದ ಘಟನೆ ಕುರಿತು ಅವರು ಮಾತನಾಡಿದರು. ಪೊಲೀಸರನ್ನು ಅಮಾನತು ಮಾಡಿರುವ ಕುರಿತು ಸಂಪೂರ್ಣ ಮಾಹಿತಿ ಇಲ್ಲ. ಈ ಬಗ್ಗೆ ತಿಳಿದುಕೊಳ್ಳಲಾಗುವುದು. ತಮ್ಮದೇ ಆದ ವ್ಯವಸ್ಥೆಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿರುತ್ತಾರೆ ಎಂದು ತಿಳಿಸಿದರು.
ಬುಧವಾರ ಯಾದಗಿರಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆಯ ಸಂದರ್ಭ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಲು ಬಂದೂಕಿನಲ್ಲಿ ಗುಂಡು ಹಾರಿಸಲಾಗಿತ್ತು. ಈ ವರ್ತನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯನ್ನು ಭಗವಂತ ಖೂಬಾ ಸಮರ್ಥಿಸಿಕೊಂಡಿದ್ದರು.
ಓದಿ: ಮೂರನೇ ಅಲೆ ನಿಯಂತ್ರಣದಲ್ಲಿದೆ, ಯಾರೂ ಆತಂಕಪಡಬೇಕಿಲ್ಲ: ಸಚಿವ ಅಶ್ವತ್ಥ ನಾರಾಯಣ