ETV Bharat / state

ಯುಪಿಯಲ್ಲಿ ಯುವತಿ ಮೇಲೆ ಅತ್ಯಾಚಾರ, ಕೊಲೆ... ಆರೋಪಿಗಳನ್ನು ಗಲ್ಲಿಗೆ ಹಾಕಲು ಆಗ್ರಹ

ಉತ್ತರ ಪ್ರದೇಶದಲ್ಲಿ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಗಲ್ಲಿಗೆ ಹಾಕಬೇಕೆಂದು ಆಗ್ರಹಿಸಿ ತಾಲೂಕು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

author img

By

Published : Oct 1, 2020, 1:35 PM IST

UP rape and murder, UP rape and murder case, protest on UP rape and murder, protest in Hospet, hospet protest, hospet protest news,ಯಪಿ ಯುವತಿ ಕೊಲೆ ಮತ್ತು ಅತ್ಯಾಚಾರ, ಯಪಿ ಯುವತಿ ಕೊಲೆ ಮತ್ತು ಅತ್ಯಾಚಾರ ಪ್ರಕರಣ, ಯಪಿ ಯುವತಿ ಕೊಲೆ ಮತ್ತು ಅತ್ಯಾಚಾರ ಸುದ್ದಿ, ಹೊಸಪೇಟೆಯಲ್ಲಿ ಪ್ರತಿಭಟನೆ, ಹೊಸಪೇಟೆ ಪ್ರತಿಭಟನೆ ಸುದ್ದಿ,
ಆರೋಪಿಗಳನ್ನು ಗಲ್ಲಿಗೆ ಹಾಕಲು ಆಗ್ರಹ

ಹೊಸಪೇಟೆ: ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಗಲ್ಲಿಗೆ ಹಾಕಬೇಕು ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ನಗರದ ರೋಟರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಆರೋಪಿಗಳನ್ನು ಗಲ್ಲಿಗೆ ಹಾಕಲು ಆಗ್ರಹಿಸಿ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ನಡೆದಿರುವ ಘಟನೆ ಅಮಾನವೀತೆಗೆ ಸಾಕ್ಷಿಯಾಗಿದೆ. ಆರೋಪಿಗಳು ಯುವತಿ ಮೇಲೆ ಅತ್ಯಾಚಾರವೆಸಗಿದ್ದಾರೆ. ಅದನ್ನು ಮುಚ್ಚಿಹಾಕಲು ಪೊಲೀಸರು ಬೆಳಗ್ಗೆ 3 ಗಂಟೆ ಮೃತದೇಹವನ್ನು ಸುಟ್ಟು ಹಾಕಿದ್ದಾರೆ. ಇದು ಪೈಶಾಚಿಕ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಯುವತಿಯನ್ನು ಅತ್ಯಾಚಾರ ಮಾಡಿದವರನ್ನು ಗಲ್ಲಿಗೆ ಹಾಕಬೇಕು. ಇಲ್ಲವಾದಲ್ಲಿ ಈ ಹಿಂದೆ ತೆಲಂಗಾಣ ರಾಜ್ಯದಲ್ಲಿ ಆರೋಪಿಗಳನ್ನು ಎನ್​ಕೌಂಟರ್ ಮಾಡಿದ ಮಾದರಿಯಲ್ಲಿ ಆರೋಪಿಗಳಿಗೆ ಶಿಕ್ಷೆ ನೀಡಬೇಕು. ಇನ್ನು ಮೃತದೇಹ ಸುಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಪ್ರಕರಣದ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು. ದೇಶದಲ್ಲಿನ ಮಹಿಳೆಯರಿಗೆ ಹಾಗೂ ದಲಿತರಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.