ಬಳ್ಳಾರಿ: ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ- 2019ರ ಹಿನ್ನೆಲೆಯಲ್ಲಿ ಮೇ 29 ರಂದು ಮತದಾನ ನಡೆಯಲಿದ್ದು, 31 ರಂದು ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಹಾಗೂ ಮತ ಎಣಿಕೆ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾತ್ ಮನೋಹರ ಆದೇಶ ಹೊರಡಿಸಿದ್ದಾರೆ.
ಮತ ಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳು ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಕಾನೂನು ಸುವ್ಯವಸ್ಥೆ ಭಂಗವಾಗುವ ಸಾಧ್ಯತೆಗಳು ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮೇ 31ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮತ ಎಣಿಕೆಯ ಕೇಂದ್ರದ ವ್ಯಾಪ್ತಿಯ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ.
ಮೇ 29ರಂದು ಮತದಾನ: ಮೇ 29ರಂದು ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿ, ಸಂಡೂರು, ಹೂವಿನಹಡಗಲಿ ಹಾಗೂ ಹರಪನಹಳ್ಳಿ ಪುರಸಭೆಗಳಲ್ಲಿ ಮತದಾನ ನಡೆಯಲಿದ್ದು, ಮತದಾನ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಮದ್ಯ ಮಾರಾಟ ನಿಷೇಧ: ಮತದಾನ ದಿನವಾದ ಮೇ 29 ರಂದು ಮತ್ತು ಮತ ಎಣಿಕೆ ದಿನವಾದ ಮೇ 31 ರಂದು ಮದ್ಯ ಮಾರಾಟ ವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.