ಬಳ್ಳಾರಿ: ರಾಜ್ಯ ಸರ್ಕಾರ ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನಿಗದಿಪಡಿಸಿರುವುದು ಹಾವು ಸಾಯಬಾರದು ಕೋಲು ಮುರಿಯಬಾರದು ಎಂಬಂತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಪತ್ರೇಶ ಹಿರೇಮಠ ದೂರಿದ್ದಾರೆ.
ನಗರದಲ್ಲಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಮೆಕ್ಕೆಜೋಳ ಖರೀದಿಸಲು ಸರ್ಕಾರ ಸೂಚಿಸಿದೆ. ಆದರೆ, ಅದು ಧಾರವಾಡದ ಪಶು ಆಹಾರ ಸಂಸ್ಕರಣ ಘಟಕದ ಸೂಚನೆಯ ಮೇರೆಗೆ ಖರೀದಿಸಲಾಗುತ್ತದೆ. ಇದರಿಂದ ರೈತರು ಮತ್ತಷ್ಟು ಆರ್ಥಿಕ ಸಂಕಷ್ಟ ಎದುರಿಸುವ ಸಾಧ್ಯತೆಯಿದೆ ಎಂದು ಹೇಳಿದರು.
ಆದ್ದರಿಂದ ರಾಜ್ಯ ಸರ್ಕಾರ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಸ್ಥಳೀಯ ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರವನ್ನು ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ.