ಬಳ್ಳಾರಿ: ಬಿಜೆಪಿ ಪಕ್ಷ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ ಎಂದು ಮಾಜಿ ಸಂಸದ ವಿ.ಉಗ್ರಪ್ಪ ವಾಗ್ದಾಳಿ ನಡೆಸಿದರು.
ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣ ಮಾಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಸಿ.ಟಿ.ರವಿ ಸಚಿವ ಸ್ಥಾನ ಕಳೆದುಕೊಂಡ ನಂತರ ನೀರಿನಿಂದ ಹೊರತೆಗೆದ ಮೀನಿನಂತೆ ಒದ್ದಾಡುತ್ತಿದ್ದಾರೆ ಎಂದರು.
ಬಿಜೆಪಿಯವರಿಗೆ ಸಂಸ್ಕಾರ ಇಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಜೊತೆ ಆರ್‌ಎಸ್‌ಎಸ್‍ನ ಪ್ರಮುಖರು ಹೋರಾಟ ಮಾಡಿಲ್ಲ. ಸ್ವಾತಂತ್ರ್ಯ ಹೋರಾಟದ ವೈಚಾರಿಕತೆಯೇ ಅವರಿಗೆ ಗೊತ್ತಿಲ್ಲದೆ ಮನಬಂದಂತೆ ಮಾತನಾಡುತ್ತಿದ್ದಾರೆ. ಜನಾಶೀರ್ವಾದ ಯಾತ್ರೆಗಿಂತ ಜನದ್ರೋಹ ಯಾತ್ರೆ ಮಾಡುವುದು ಬಿಜೆಪಿಯವರಿಗೆ ಸೂಕ್ತ. ರಾಜ್ಯದ ಜನರಿಗೆ ಬಿಜೆಪಿ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.