ಬಳ್ಳಾರಿ: ಗಣಿನಾಡು ಬಳ್ಳಾರಿಯ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿ, ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಮಾನವೀಯ ಅಂತ್ಯಸಂಸ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಕೊರೊನಾ ಪಾಸಿಟಿವ್ನಿಂದ ಮೃತಪಟ್ಟ ಎಂಟು ಜನರ ಮೃತ ದೇಹವನ್ನು ಅಮಾನವೀಯವಾಗಿ ಸಂಸ್ಕಾರ ಮಾಡಿದ್ದನ್ನು ವಿರೋಧಿಸಿದರು. ಈ ವೇಳೆ ಅವರು ಕಾಯಿ ಹೊಡೆದು, ಕರ್ಪೂರ ಹಚ್ಚಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಲ್ಲಿಸಿದರು.
ಇಂತಹ ನಿರ್ಲಕ್ಷ್ಯಕ್ಕೆ ಕಾರಣರಾಗಿರುವ ಜಿಲ್ಲೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸೇರಿದಂತೆ ಶಾಸಕರು ಕೂಡ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.