ಹೊಸಪೇಟೆ(ವಿಜಯನಗರ) : ವಟ್ಟಮ್ಮನಹಳ್ಳಿಯಲ್ಲಿ ಓರ್ವ ಮಗು ಸೇರಿ 11 ಜನರಲ್ಲಿ ವಾಂತಿ-ಬೇಧಿ ಕಾಣಿಸಿಕೊಂಡಿದೆ. ಮೂರ್ನಾಲ್ಕು ದಿನಗಳಿಂದ ಗ್ರಾಮದಲ್ಲಿ ಹಲವಾರು ಮಂದಿಯ ಆರೋಗ್ಯದಲ್ಲಿ ವ್ಯತ್ಯಯವಾಗುತ್ತಿದೆ. ನೀರಿನ ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿದೆ.
ಈ ಹಿನ್ನೆಲೆ ಗ್ರಾಮಕ್ಕೆ ಹಗರಿಬೊಮ್ಮನಹಳ್ಳಿ ತಹಶೀಲ್ದಾರ್ ಶರಣಮ್ಮ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ 11 ಜನರ ಪೈಕಿ ಐವರು ಗುಣಮುಖರಾಗಿದ್ದು, ಆರು ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.