ETV Bharat / state

ವಿಮ್ಸ್ ಆಸ್ಪತ್ರೆ ದುರಂತ: ಸಚಿವ ಸುಧಾಕರ್ ವಿರುದ್ಧ ಶಾಸಕ ಸೋಮಶೇಖರ ರೆಡ್ಡಿ ಅಸಮಾಧಾನ - ಈಟಿವಿ ಭಾರತ್​ ಕನ್ನಡ

ವಿಮ್ಸ್ ದುರಂತಕ್ಕೆ ಆಸ್ಪತ್ರೆಯ ನಿರ್ದೇಶಕ ಡಾ. ಗಂಗಾಧರಗೌಡ ಅವರ ನಿರ್ಲಕ್ಷ್ಯವೇ ಕಾರಣ ಎಂದು ಶಾಸಕ ಸೋಮಶೇಖರ ರೆಡ್ಡಿ ಆರೋಪಿಸಿದ್ದಾರೆ.

vims-hospital-death-issue
ಶಾಸಕ ಸೋಮಶೇಖರ ರೆಡ್ಡಿ
author img

By

Published : Sep 17, 2022, 5:43 PM IST

Updated : Sep 17, 2022, 6:58 PM IST

ಬಳ್ಳಾರಿ: ಇಲ್ಲಿಯ ವಿಮ್ಸ್ ದುರಂತಕ್ಕೆ ಆಸ್ಪತ್ರೆಯ ನಿರ್ದೇಶಕ ಡಾ.ಗಂಗಾಧರಗೌಡ ಅವರ ನಿರ್ಲಕ್ಷ್ಯವೇ ಕಾರಣ. ಈಗಿರುವ ವಿಮ್ಸ್ ನಿರ್ದೇಶಕರನ್ನು ನೇಮಕಮಾಡುವುದು ಬೇಡ ಎಂದು ಖಚಿತವಾಗಿ ಹೇಳಿತ್ತು. ಆದರೆ, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಪಾರದರ್ಶಕವಾಗಿ ಕೆಲಸ ಮಾಡುತ್ತಾರೆಂದು ಇವರನ್ನು ನೇಮಕ ಮಾಡಿದ್ದಾರೆ. ಇವರಿಗಿಂತ ಅನುಭವಿ ವೈದ್ಯರು ಇದ್ದರು ಎಂದು ಪರೋಕ್ಷವಾಗಿ ಸಚಿವ ಸುಧಾಕರ್ ಕಾರ್ಯವೈಕರಿ ಬಗ್ಗೆ ಶಾಸಕ ಸೋಮಶೇಖರ ರೆಡ್ಡಿ ತಮ್ಮ ಅಸಮಾಧಾನ ಹೊರ ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರು, ಸಚಿವ ಸುಧಾಕರ್ ಅವರು ಯಾರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ, ಅವರದೇ ಆದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾರೆ. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಮ್ಮ ಎಲ್ಲ ವಿಚಾರಗಳಿಗೆ ಸ್ಪಂದಿಸುತ್ತಾರೆ. ನಮ್ಮ ಸಮಸ್ಯೆ ಪರಿಹರಿಸುತ್ತಾರೆ, ಈಗಿನ ನಿರ್ದೇಶಕರ ಬದಲಾವಣೆ ಮಾಡಬೇಕು ಎಂದು ಸಿಎಂಗೆ ಮನವಿ ಮಾಡುತ್ತೇವೆ. ಅವರನ್ನು ಬದಲಾವಣೆ ಮಾಡಿದರೆ ಒಳ್ಳೆಯದು ಎಂದರು.

ನಿರ್ದೇಶಕರ ನಿರ್ಲಕ್ಷ್ಯವೇ ಕಾರಣ ಎಂದ ಶಾಸಕ ಸೋಮಶೇಖರ ರೆಡ್ಡಿ ಆರೋಪ

ಸಚಿವ ಶ್ರೀರಾಮುಲು ಮತ್ತು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಮಾಡಿದ್ದರಿಂದ ಮೃತರಿಗೆ ಐದು ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಇದನ್ನು ಸರ್ಕಾರಿ ಪ್ರಾಯೋಜಿತ ಸಾವುಗಳು ಎಂದು ಹೇಳುವುದು ಸರಿಯಲ್ಲ, ನಿತ್ಯವು ಹಲವು ಜನರು ತೀರಿಕೊಂಡು ಹೋಗುತ್ತಾರೆ. ಅದಕ್ಕೆ ಸರ್ಕಾರವೇ ಕಾರಣವೆಂದು ಹೇಳುವುದು ಸರಿಯಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ಬಳ್ಳಾರಿ ವಿಮ್ಸ್​ನಲ್ಲಿ ಆರಕ್ಕೇರಿದ ಸಾವಿನ ಪ್ರಕರಣ.. ಮೃತಪಟ್ಟವರ ವಿಡಿಯೋ ವೈರಲ್.. ತನಿಖಾ ತಂಡದ ಭೇಟಿ

Last Updated : Sep 17, 2022, 6:58 PM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.