ಬಳ್ಳಾರಿ: ಇಂದು 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಕಾಲೇಜಿನ ಸಖಿ ಮತಗಟ್ಟೆ ಕೇಂದ್ರದಲ್ಲಿ ಮತದಾನ ಆರಂಭಕ್ಕೂ ಮುನ್ನವೇ ಮಹಿಳೆಯರು ಆಗಮಿಸಿ ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು.
ಬಿಸಿಲು ಹೆಚ್ಚಾಗಬಹುದು ಎಂಬ ಕಾರಣದಿಂದ ಬಳ್ಳಾರಿಯಲ್ಲಿ ಬೆಳ್ಳಂಬೆಳಗ್ಗೆ ಮಹಿಳಾ ಮತದಾರರು ಸಖಿ ಮತಗಟ್ಟೆಳತ್ತ ಧಾವಿಸಿದರು. ಈ ವೇಳೆ ಉತ್ಸಾಹದಿಂದಲೇ ತಮ್ಮ ಹಕ್ಕು ಚಲಾಯಿಸಿದರು. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.