ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ನದಿಗೆ ಹರಿ ಬಿಡಲಾಗಿದೆ. ಈ ಹಿನ್ನೆಲೆಯಲ್ಲಿ ಕಂಪ್ಲಿಯ ಸೇತುವೆ ಮುಳುಗಡೆ ಆಗುವ ಹಂತಕ್ಕೆ ತಲುಪಿದೆ.
ಈ ಸೇತುವೆ ಕಂಪ್ಲಿ ಹಾಗೂ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ. ಈಗಾಗಲೇ ಮುನ್ನೆಚ್ಚರಿಕಾ ಕ್ರಮವನ್ನು ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲಾಡಳಿತಗಳು ತೆಗೆದುಕೊಂಡಿವೆ. ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. ಗಂಗಾವತಿ ಭಾಗದಿಂದ ಬರುವ ಭಾರೀ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ.
ಕಂಪ್ಲಿ ಪೊಲೀಸ್ ಠಾಣೆಯ ಸಿಪಿಐ ಹುಲಗಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ, ಸೇತುವೆ ಮೇಲ್ಭಾಗದಲ್ಲಿ ನೀರು ಕಂಡು ಬಂದರೆ ಸಂಚಾರವನ್ನು ನಿಷೇಧಿಸಲು ಸೂಚಿಸಿದ್ದಾರೆ.