ETV Bharat / state

ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು; ಸಿ.ಟಿ. ರವಿ - ಬಿಜೆಪಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ

ಶಿರಾ ಹಾಗೂ ಆರ್​.ಆರ್.ನಗರ ಬೈ ಎಲೆಕ್ಷನ್​ನಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

c.t.ravi
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ
author img

By

Published : Oct 21, 2020, 7:41 PM IST

ಬಳ್ಳಾರಿ: ರಾಜ್ಯದ ಎರಡು ವಿಧಾನಸಭಾ ಉಪ ಚುನಾವಣೆ ಹಾಗೂ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರದ ತಾಳೂರು ರಸ್ತೆಯಲ್ಲಿರುವ ಗೋವಿಂದಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಸಂಜೆ ನಡೆದ ಈಶಾನ್ಯ ಶಿಕ್ಷಕರ ಮತ ಕ್ಷೇತ್ರದ ಜಿಲ್ಲಾ ಪ್ರಮುಖರ ಚುನಾವಣೆ ಸಭೆಯಲ್ಲಿ ಮಾತನಾಡಿದ ಅವರು, ಶಿರಾ ಮತ್ತು ರಾಜರಾಜೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಪತಾಕೆಯನ್ನ ಹಾರಿಸಲಿದೆ. ಕಾಂಗ್ರೆಸ್, ಜೆಡಿಎಸ್​ನವ್ರಿಗೆ ಈ ಉಪ ಚುನಾವಣೆ ತಕ್ಕಪಾಠ ಕಲಿಸಲಿದೆ ಎಂದ್ರು.

ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಸಿ.ಟಿ.ರವಿ

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ‌ ಕೆ.ಎಸ್.ಈಶ್ವರಪ್ಪ, ಹರಪನಹಳ್ಳಿ ಶಾಸಕ ಗಾಲಿ ಕರುಣಾಕರರೆಡ್ಡಿ, ಬ್ರಾಹ್ಮಣ ಸಮುದಾಯದ ಮುಖಂಡ ಸಚ್ಚಿದಾನಂದಮೂರ್ತಿ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ಎಸ್.ಗುರುಲಿಂಗನಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಚನ್ನಬಸವನಗೌಡ ಪಾಟೀಲ ಸೇರಿ ಮತ್ತಿತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.