ಬಳ್ಳಾರಿ : ಯುಪಿಯ ಹಥ್ರಾಸ್‌ನಲ್ಲಿ ಮನಿಷ್ ವಾಲ್ಮೀಕಿ ಎಂಬ ಯುವತಿಯ ಮೇಲೆ ಅಮಾನುಷವಾಗಿ ಸಾಮೂಹಿಕ ಅತ್ಯಾಚಾರ ಎಸಗಿದ ವಿಕೃತ ಮನಸ್ಥಿತಿಯ ಕಾಮುಕರನ್ನು ತಕ್ಷಣವೇ ಗಲ್ಲಿಗೆರಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಮಹಾಸಭಾ ರಾಜ್ಯ ಮಹಿಳಾ ಘಟಕದ ಗೌರವ ಅಧ್ಯಕ್ಷೆ ಕಮಲ ಮರಿಸ್ವಾಮಿ ಅವರು ಒತ್ತಾಯ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿಯ ಮನಸ್ಸು ರೋಗಿಯಂತಾಗಿದೆ. ಅವರು ತಮ್ಮ ರಾಜ್ಯದ ಕಾನೂನು ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ.
ಅವರ ಸರ್ಕಾರಕ್ಕೆ ಮಹಿಳೆಯರ ಮೇಲೆ ಗೌರವವಿಲ್ಲ. ನಿರ್ಭಯ ಪ್ರಕರಣದಂತೆ ಈ ಪ್ರಕರಣವನ್ನೂ ಪರಿಗಣಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಯುವತಿಯ ಮೇಲೆ ಅಮಾನಷವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ವಿಕೃತಿ ಮೆರೆದಿರುವ ಕಾಮುಕರನ್ನು ತಕ್ಷಣವೇ ಗಲ್ಲಿಗೆರಿಸಬೇಕು ಎಂದು ಒತ್ತಾಯಿಸಿದರು.
ಹಾಥ್ರಾಸ್‌ನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ವೀರ್, ಜಿಲ್ಲಾಧಿಕಾರಿ ಪ್ರವೀಣ್‌ಕುಮಾರ್, ಜಂಟಿ ಮ್ಯಾಜಿಸ್ಟ್ರೇಟ್ ಪ್ರೇಮ್ ಪ್ರಕಾಶ್ ಮೀನಾ, ಕಾನೂನು ಹಾಗೂ ಸುವ್ಯವಸ್ಥೆಯ ವಿಭಾಗದ ಎವಿಜಿ ಪ್ರಶಾಂತ್ ಕುಮಾರ್ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಈ ಸಮಯದಲ್ಲಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಮಹಾಸಭಾ ಜಿಲ್ಲಾಧ್ಯಕ್ಷ ದೊಡ್ಡ ಎರಿಸ್ವಾಮಿ, ಜಿಲ್ಲಾ ಪ್ರ. ಕಾರ್ಯದರ್ಶಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ಕೃಷ್ಣ ಮತ್ತಿತರರು ಪಾಲ್ಗೊಂಡಿದ್ದರು.