ಬಳ್ಳಾರಿ: ಕಳೆದ ಮೂರು ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ಬಿದ್ದು ಮಹಿಳೆಯೊರ್ವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಎಮ್ಮಿಗನೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಉಮಾದೇವಿ (50) ಎಂದು ಗುರುತಿಸಲಾಗಿದೆ. ಮನೆಯ ಸುತ್ತಮುತ್ತ ನೀರು ನಿಂತ ಕಾರಣ ಗೋಡೆ ತೇವಗೊಂಡಿದ್ದು, ರಾತ್ರಿ ನಿದ್ರಿಸುತ್ತಿದ್ದ ಸಂದರ್ಭದಲ್ಲಿ ಕುಸಿದಿದೆ.
ಪಕ್ಕದಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೋಡೆಯ ಅವಶೇಷದಡಿಯಲ್ಲಿ ಸಿಲುಕಿದ್ದ ತಾಯಿಯನ್ನು ಮಕ್ಕಳು ಮತ್ತು ಸ್ಥಳೀಯರು ಮೇಲೆತ್ತಿದ್ದಾರೆ. ಕುರುಗೋಡು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಕೋಲಾರ: ಮಳೆಯಿಂದ ತುಂಬಿ ಹರಿಯುತ್ತಿರುವ ಹಳ್ಳಗಳು, ಗ್ರಾಮಸ್ಥರಿಂದ ರಸ್ತೆ ಬಂದ್!