ಹೊಸಪೇಟೆ: ತೀವ್ರ ಹೆರಿಗೆ ನೋವು ಕಾಣಿಸಿಕೊಂಡ ಗರ್ಭಿಣಿಯನ್ನು ಆ್ಯಂಬುಲೆನ್ಸ್ನಲ್ಲಿ ಕರೆದೊಯ್ಯುತ್ತಿದ್ದ ಸಂದರ್ಭ ದಾರಿ ಮಧ್ಯೆಯೇ ಹೆರಿಗೆಯಾದ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಗಾಣಗಟ್ಟ ಗ್ರಾಮದಲ್ಲಿ ನಡೆದಿದೆ.
ಓದಿ: ರಾಜಧಾನಿಯಲ್ಲಿ ಮತ್ತೊಬ್ಬ ರೌಡಿಶೀಟರ್ ಬರ್ಬರ ಹತ್ಯೆ : ಮರ್ಡರ್ ಮಾಡಿ ದುಷ್ಕರ್ಮಿಗಳು ಎಸ್ಕೇಪ್
ಉಜ್ಜಯಿನಿ 108 ಆ್ಯಂಬುಲೆನ್ಸ್ ಗಾಣಗಟ್ಟದಿಂದ ಮಂಜಮ್ಮಳನ್ನು ಜಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಹೆರಿಗೆ ನೊವು ಕಾಣಿಸಿಕೊಂಡಿದೆ. ಈ ವೇಳೆ ಶುಶ್ರೂಷಕ ಮತ್ತು ಪೈಲಟ್ ಆ್ಯಂಬುಲೆನ್ಸ್ ನಲ್ಲಿ ಸುರಕ್ಷಿತ ಹೆರಿಗೆ ಮಾಡಿಸಿದರು. ಬಳಿಕ ತಾಯಿ ಮತ್ತು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ತಾಯಿ ಮತ್ತು ಗಂಡು ಮಗು ಆರೋಗ್ಯವಾಗಿದ್ದಾರೆ.