ಬಳ್ಳಾರಿ: ಬೆಳಗಾವಿ ಜಿಲ್ಲೆಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ತೆರವುಗೊಳಿಸಿದ ಅಧಿಕಾರಿಗಳನ್ನು ಕೂಡಲೇ ರಾಜ್ಯ ಸರ್ಕಾರ ಅಮಾನತುಗೊಳಿಸಬೇಕೆಂದು ಕರ್ನಾಟಕ ಕಾರ್ಮಿಕರ ವೇದಿಕೆ ರಾಜ್ಯ ಸಂಘಟನಾ ಕಾರ್ಯದರ್ಶಿ ಶರಣ ಎಂ. ಬಡಿಗೇರ್ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ -19 ಆರಂಭವಾದಾಗಿನಿಂದ ಕೂಲಿ ಕಾರ್ಮಿಕರಿಗೆ ಸಾಕಷ್ಟು ಮೂಲಭೂತ ಸೌಲಭ್ಯಗಳು ಸಿಗದೆ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ಅದನ್ನು ಪರಿಹರಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಒತ್ತಾಯಿಸಿದರು.
ಬಳ್ಳಾರಿ ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಬೇಕು. ಸರ್ಕಾರವು ಪೌರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನೀಡಬೇಕು. ಕನ್ನಡ ಮಾಧ್ಯಮದ ಮಕ್ಕಳಿಗೆ ಸರ್ಕಾರಿ ಉದ್ಯೋಗ ಸೌಲಭ್ಯ ಕಲ್ಪಿಸಬೇಕು. ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು.