ETV Bharat / state

ಹಿರಿಯರಿಂದ ಜ್ಞಾನ, ಸಲಹೆ ಪಡೆದುಕೊಳ್ಳಬೇಕು: ಶಾಸಕ ಸೋಮಶೇಖರ ರೆಡ್ಡಿ

ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಪೊಲೀಸ್ ಜೀಮ್ ಖಾನಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

author img

By

Published : Oct 1, 2020, 10:42 PM IST

Bellary
ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಬಳ್ಳಾರಿ: ಇಂದಿನ ಯುವ ಪೀಳಿಗೆಯು ಹಿರಿಯರಿಂದ ಸಿಗುವ ಜ್ಞಾನ, ಸಲಹೆ-ಸೂಚನೆಗಳನ್ನು ಪಡೆದುಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯಬೇಕು. ವಿವಿಧ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ್ ರೆಡ್ಡಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಪೊಲೀಸ್ ಜೀಮ್ ಖಾನಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

Bellary
ಹಿರಿಯ ನಾಗರಿಕರಿಗೆ ಸನ್ಮಾನ

ತಮ್ಮ ತಂದೆ-ತಾಯಿರನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳಬೇಕು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನು ಸರಿಯಾಗಿ ನೋಡಿಕೊಳ್ಳದೇ ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದು ದುರಂತ. ತಮ್ಮ ಮಕ್ಕಳು ಯಾವುದೇ ತೊಂದರೆ ನೀಡಿದ್ದಲ್ಲಿ ಹಿರಿಯ ನಾಗರಿಕರ ಸಹಾಯವಾಣಿ ತೆರೆದಿದ್ದು, ದೂರುಗಳನ್ನು ನೀಡಿದ್ರೆ ತಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರಾದ ಗಾಲಿ ರುಕ್ಮಿಣಮ್ಮ ಚೆಂಗಾರೆಡ್ಡಿ, ವೃದ್ಧಾಶ್ರಮದ ವೆಂಕಟಲಕ್ಷ್ಮಮ್ಮ ಹಾಗೂ ಆದರ್ಶ ವೃದ್ಧಾಶ್ರಮದ ಪಾರಮ್ಮ ಕೊಪ್ಪಳ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲರಾದ ಕೆ.ಎಂ.ಚಿಂತಾಮಣಿ ಅವರು ಹಿರಿಯನಾಗರಿಕರ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ರಾಬಕೋ ಹಾಲು ಒಕ್ಕೂಟಕ ನಿರ್ದೇಶಕರಾದ ವೀರಶೇಖರ ರೆಡ್ಡಿ, ಕರ್ನಾಟಕ ಜಾನಪದ ಪರಿಷತ್‍ನ ಜಿಲ್ಲಾಧ್ಯಕ್ಷರಾದ ಟಿ.ಹೆಚ್.ಎಂ.ಬಸವರಾಜ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿ ಕೆ.ಮಹಾಂತೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್.ನಾಗರಾಜ್, ಇಲಾಖೆ ಸಿಬ್ಬಂದಿ, ಹಿರಿಯ ನಾಗರಿಕರು ಸೇರಿದಂತೆ ಇತರರು ಇದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.