ಹೊಸಪೇಟೆ(ವಿಜಯನಗರ): ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ ಯುವಕನೋರ್ವ ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿನ ಟೋಲ್ಗೇಟ್ ಬಳಿ ಸಂಭವಿಸಿದೆ.
ಮರಿಯಮ್ಮನಹಳ್ಳಿಯ ಅರುಣ್ (27) ಎಂಬಾತ ಮೃತ ಯುವಕ ಎಂದು ತಿಳಿದುಬಂದಿದೆ. ಈತ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದಿದ್ದು, ನಿಯಂತ್ರಣ ಸಿಗದೆ ಡಿವೈಡರ್ಗೆ ಡಿಕ್ಕಿ ಹೊಡೆಸಿದ್ದಾನೆ. ಬಳಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ದೃಶ್ಯವು ಟೋಲ್ಗೇಟ್ನಲ್ಲಿನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ರೈಸ್ ಪುಲ್ಲಿಂಗ್ ದಂಧೆ: ಆಂಧ್ರ ಮೂಲದ ದಂಪತಿ ಸೇರಿ 6 ಜನರ ಬಂಧನ