ಬೀದರ್: ಗಡಿ ಜಿಲ್ಲೆ ಬೀದರ್ನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದೆ. ಇಂದು 5 ಮಂದಿ ಅಪ್ರಾಪ್ತರು ಸೇರಿ ಒಟ್ಟು 11 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.
ನಗರದ ಓಲ್ಡ್ ಸಿಟಿಯಲ್ಲಿ ಜಿಲ್ಲಾಡಳಿತ ನಡೆಸುತ್ತಿರುವ ಸಾಮೂಹಿಕ ವೈದ್ಯಕೀಯ ತಪಾಸಣೆಯಲ್ಲಿ ಈ ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸದ್ಯಕ್ಕೆ ಸೋಂಕಿತರ ಸಂಪರ್ಕಕ್ಕೆ ಬಂದಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.
ಸೋಂಕಿತರೆಲ್ಲರೂ ಓಲ್ಡ್ ಸಿಟಿ ನಿವಾಸಿಗಳಾಗಿದ್ದು ಎಲ್ಲರನ್ನೂ ಜಿಲ್ಲಾಸ್ಪತ್ರೆಯ ಕೊರೊನಾ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದ್ದು, ಈ ಪೈಕಿ 14 ಜನರು ಗುಣಮುಖರಾಗಿದ್ದಾರೆ. ಈಗ 26 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.