ಬೀದರ್: ದೆಹಲಿಯಲ್ಲಿ ತಬ್ಲಿಘಿ ಜಮಾತ್ಗೆ ಹೋಗಿ ಬಂದವರ ಸಂಪರ್ಕದಲ್ಲಿರುವವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಂದು ಸೋಂಕಿತರ ಸಂಖ್ಯೆ 14ಕ್ಕೆ ಏರಿದೆ. ಗಡಿ ಜಿಲ್ಲೆ ಬೀದರ್ನಲ್ಲಿ ಒಟ್ಟು 554 ಶಂಕಿತರ ಗಂಟಲು ದ್ರವ ಹಾಗೂ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ವರದಿ ಪ್ರಕಟಿಸಿದೆ.
ಜಿಲ್ಲೆಯಲ್ಲಿ 18 ವಯಸ್ಸಿನ ಯುವಕನಲ್ಲಿ ಸೋಂಕು ದೃಢಪಟ್ಟಿದೆ. ನಗರದ ಹಳೇ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 12 ಇದ್ದು, ಮನ್ನಾಖೆಳ್ಳಿ ಹಾಗೂ ಬಸವಕಲ್ಯಾಣದಲ್ಲಿ ತಲಾ ಒಂದೊಂದು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಈಗಾಗಲೇ ಕಲಬುರಗಿ ಪ್ರಯೋಗಾಲಯಕ್ಕೆ ಜಿಲ್ಲೆಯಿಂದ ಒಟ್ಟು 939 ಶಂಕಿತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರಲ್ಲಿ 371 ವರದಿ ನೆಗೆಟಿವ್ ಬಂದಿದೆ. ಇನ್ನೂ 554 ಜನರ ವರದಿ ಬಾಕಿ ಇದೆ. ಇದರಲ್ಲಿ ದೆಹಲಿ ಜಮಾತ್ನಲ್ಲಿ ಭಾಗವಹಿಸಿ ಸೋಂಕು ತಗುಲಿಸಿಕೊಂಡ 10 ಜನರ ಪ್ರಾಥಮಿಕ ಸಂಪರ್ಕದಲ್ಲಿ 524 ಜನರಿದ್ದಾರೆ. 2ನೇ ಹಂತದ ಸಂಪರ್ಕದಲ್ಲಿ 1229 ಶಂಕಿತರ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.