ಬೀದರ್: ಕಬ್ಬಿನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ನಿವಾಸಿ ಮಾಣಿಕ ಗುಂಡಪ್ಪ ಜ್ಯಾಂತೆ ಎಂಬಾತ ತನ್ನ ಗದ್ದೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆ ಬೆಳೆಯುತ್ತಿರುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಅಂದಾಜು 5 ರಿಂದ 8 ಅಡಿ ಉದ್ದ ಬೆಳೆದ 145 ಕೆಜಿ ಗಾಂಜಾ ಬೆಳೆಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಎಸಪಿ ನಾಗೇಶ್ ಡಿ.ಲ್, ಎಎಸ್ಪಿ ಗೋಪಾಲ ಬ್ಯಾಕೋಡ ಡಿವೈಎಸ್ಪಿ ದೇವರಾಜ್ ಡಿ ಅವರ ಮಾರ್ಗದರ್ಶನದಲ್ಲಿ ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಪಿಎಸ್ಐ ಮಹಾಂತೇಶ ಲಂಬಿ ನೇತೃತ್ವದಲ್ಲಿ ಪೊಲೀಸರ ತಂಡ ತಹಸೀಲ್ದಾರ್ ನಾಗಯ್ಯ ಹಿರೇಮಠ ಅವರ ಸಮ್ಮುಖದಲ್ಲಿ ದಾಳಿ ನಡೆಸಿ ಅಕ್ರಮ ದಂಧೆ ಬಯಲು ಮಾಡಿದ್ದು ಆರೋಪಿಯನ್ನು ಅರೇಸ್ಟ್ ಮಾಡಿದ್ದಾರೆ.
ಈ ಕುರಿತು ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.