ಬೀದರ್: ಎರಡು ಕಡೆ ದಾಳಿ ನಡೆಸಿರುವ ಪೊಲೀಸರು 15.5 ಕೆಜಿ ಗಾಂಜಾ ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಓರ್ವ ಆರೋಪಿ ಬಂಧಿಸಿದ್ದಾರೆ.
ಅಕ್ರಮವಾಗಿ ಗಾಂಜಾ ಮಾರಾಟ ಜಿಲ್ಲೆಯ ಹುಮನಾಬಾದ್ ತಾಲೂಕಿನ ಘೋಡವಾಡಿ ಗ್ರಾಮದಲ್ಲಿ ಮಹಮ್ಮದ ಗೌಸ್ ಬೊಂಗೆ ಎಂಬಾತನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿಯಿಂದ ಪೊಲೀಸರು 3.5 ಕೆಜಿ ಗಾಂಜಾ ಜಪ್ತಿ ಮಾಡಿಕೊಂಡಿದ್ದಾರೆ.
ಆರೋಪಿ ಬಳಿ ಇದ್ದ 5 ಸಾವಿರ ರೂಪಾಯಿ ಜಪ್ತಿ ಮಾಡಲಾಗಿದೆ. ಡಿವೈಎಸ್ಪಿ ಬಸವೇಶ್ವರ ಹೀರಾ ಮಾರ್ಗದರ್ಶನದಲ್ಲಿ ಪಿಎಸ್ಐ ರವಿಕುಮಾರ್ ಅವರ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಈ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಲಿ(ಜೆ) ಬಳಿ 12 ಕೆ ಜಿ ಗಾಂಜಾ ಜಪ್ತಿ: ನೆರೆ ರಾಜ್ಯದ ತೆಲಂಗಣ ಮೂಲಕ ಅಕ್ರಮವಾಗಿ ರಾಜ್ಯದಲ್ಲಿ ಗಾಂಜಾ ಸಾಗಾಟ ಮಾಡ್ತಿದ್ದ ಕಾರವೊಂದರಲ್ಲಿ 12 ಕೆ.ಜಿ ಗಾಂಜಾ ಪತ್ತೆಯಾಗಿದ್ದು, ಎರಡು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ. ಆದರೆ ಸ್ಥಳದಲ್ಲಿ ಆರೋಪಿಗಳು ಇರಲಿಲ್ಲ ಎಂದು ತಿಳಿದು ಬಂದಿದೆ. ಜಿಲ್ಲಾ ಪೊಲೀಸ್ ಇಲಾಖೆಯ ಸೆನ್ ವಿಭಾಗದ ಸಿಪಿಐ ಸುಭಾಷ ಪೂಲಾರಿ ನೇತೃತ್ವದಲ್ಲಿ ಈ ದಾಳಿ ಮಾಡಲಾಗಿದೆ.