ETV Bharat / state

ಗೋಡೌನ್ ಮೇಲೆ ದಾಳಿ : 115 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ - ಪಡಿತರ ಅಕ್ಕಿ ಜಪ್ತಿ

ಸಾರ್ವಜನಿಕರಿಂದ ಕಡಿಮೆ ಬೆಲೆಯಲ್ಲಿ ಪಡಿತರ ಅಕ್ಕಿ ಖರೀದಿಸಿ, ಕಾಳ ಸಂತೆಗೆ ಮಾರಾಟ ಮಾಡುವ ಕೆಲಸದಲ್ಲಿ ನಿರತರಾಗಿದ್ದರು ಎನ್ನುವ ಮಾಹಿತಿ ಆಧಾರದ ಮೇಲೆ ಗೋಡೌನ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 115 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ.

15 quintal ration rice confiscated by Police
ಗೋಡೌನ್ ಮೇಲೆ ದಾಳಿ : 115 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ
author img

By

Published : Nov 2, 2020, 10:25 PM IST

ಬಸವಕಲ್ಯಾಣ: ಅನ್ನಭಾಗ್ಯ ಯೋಜನೆಯಡಿ ಬಡವರ ಹೊಟ್ಟೆ ಸೇರಬೇಕಿದ್ದ ಪಡಿತರ ಅಕ್ಕಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿ ಇಡಲಾಗಿದ್ದ ಗೋಡೌನ್ ಮೇಲೆ ದಾಳಿ ಮಾಡಿದ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳ ತಂಡ ಸುಮಾರು 3.45 ಲಕ್ಷ ಮೌಲ್ಯದ 115 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ ಘಟನೆ ನಗರದಲ್ಲಿ ನಡೆದಿದೆ.

ನಗರದ ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಂಗಡಿ ಹೊಂದಿದ ಆರೋಪಿಗಳು, ಸಾರ್ವಜನಿಕರಿಂದ ಕಡಿಮೆ ಬೆಲೆಯಲ್ಲಿ ಪಡಿತರ ಅಕ್ಕಿ ಖರೀದಿಸಿ, ಕಾಳ ಸಂತೆಗೆ ಮಾರಾಟ ಮಾಡುವ ಕೆಲಸದಲ್ಲಿ ನಿರತರಾಗಿದ್ದರು ಎನ್ನುವ ಮಾಹಿತಿ ಆಧಾರದ ಮೇಲೆ ಗೋಡೌನ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 115 ಕ್ವಿಂಟಾಲ್ ಅಕ್ಕಿ ಜಪ್ತಿ ಮಾಡಿದ್ದಾರೆ.

ಆಹಾರ ಇಲಾಖೆ ನಿರೀಕ್ಷಕ ರಾಮರತನ್ ದೇಗಲೆ, ಡಿವೈಎಸ್ಪಿ ಸೋಮಲಿಂಗ ಕುಂಬಾರ, ಸಿಪಿಐ ಜೆ.ಎಸ್, ನ್ಯಾಮಗೌಡರ್, ನಗರ ಠಾಣೆ ಪಿಎಸ್‌ಐ ಗುರು ಪಾಟೀಲ ನೇತೃತ್ವದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.

ಅಕ್ತಿ ಸಂಗ್ರಹಿಸಿ ಇಟ್ಟಿರುವ ನಗರದ ನಾರಾಯಣಪೂರ ಕ್ರಾಸ್ ಸಮೀಪದ ನಿವಾಸಿಗಳಾದ ದಿಲೀಪ್ ಹಾಗೂ ಅಂಬಾದಾಸ್ ಮಕಾಜಿ ಎನ್ನುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಇನ್ನು ಈ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.