ETV Bharat / state

ಬೀದರ್​​: ಪಶು ವಿವಿ ಸಮಗ್ರ ಅಭಿವೃದ್ಧಿಗೆ ಬದ್ಧ.. ಸಚಿವ ಪ್ರಭು ಚವ್ಹಾಣ್​ - ಈಟಿವಿ ಭಾರತ ಕನ್ನಡ

ಕರ್ನಾಟಕ ಪಶು ವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಪ್ರಭು ಚವ್ಹಾಣ್​ ಉದ್ಘಾಟಿಸಿದರು.

18th-bidar-vetrenery-univercity-day
ಸಚಿವ ಪ್ರಭು ಚವ್ಹಾಣ
author img

By

Published : Jan 17, 2023, 8:37 PM IST

ಬೀದರ್​: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಚವ್ಹಾಣ್​ ಅವರು ತಿಳಿಸಿದರು. ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇಂದು ಜರುಗಿದ ವಿಶ್ವವಿದ್ಯಾಲಯದ 18ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಾಕಷ್ಟು ಅನ್ಯಾಯವಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಪ್ರಗತಿ ಕೆಲಸಗಳಾಗುತ್ತಿವೆ. ವಿವಿ ಆವರಣದಲ್ಲಿ ಆಡಳಿತ ಭವನ ನಿರ್ಮಾಣಕ್ಕಾಗಿ 25 ಕೋಟಿ ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂಬರುವ ಆಯವ್ಯಯದಲ್ಲಿ ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು. ಅಲ್ಲದೇ ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ಅವಶ್ಯಕತೆಯಿರುವ ಬೇಡಿಕೆಗಳನ್ನು ಲಿಖಿತವಾಗಿ ಸಲ್ಲಿಸಬೇಕು. ಮುಂದಿನ ದಿನಗಳಲ್ಲಿ ಎಲ್ಲ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ತಿಳಿಸಿದರು.

ಬೋಧಕೇತರ ಹುದ್ದೆಗಳ ಭರ್ತಿ ಕಾರ್ಯ ಪ್ರಕ್ರಿಯೆ: ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಭರ್ತಿ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಅಥಣಿ ಕಾಲೇಜಿಗೆ 30 ಕೋಟಿ ಅನುದಾನ ನೀಡಲಾಗಿದೆ. ಹೀಗೆ ವಿವಿ ವ್ಯಾಪ್ತಿಯಲ್ಲಿರುವ ಎಲ್ಲ ಕಾಲೇಜುಗಳ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಿದೆ ಎಂದು ಸಚಿವರು ಹೇಳಿದರು. ನಮ್ಮ ದೇಶ ಕೃಷಿ ಪ್ರಧಾನ ದೇಶ. ಜಾನುವಾರುಗಳು ರೈತರ ಆರ್ಥಿಕತೆಗೆ ಬೆನ್ನೆಲುಬಿನಂತೆ ಕೆಲಸ ಮಾಡುತ್ತವೆ. ಹಾಗೆಯೇ ಗೋವುಗಳಿಗೆ ಪವಿತ್ರ ಸ್ಥಾನಮಾನ ನೀಡಲಾಗಿದೆ.

ಗೋವನ್ನು ಮಾತೆಯೆಂದು ಪೂಜಿಸಲಾಗುತ್ತದೆ. ಇಂತಹ ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುವುದನ್ನು ತಪ್ಪಿಸಿ ಜಾನುವಾರುಗಳ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರಡಿ ಈವರೆಗೆ 35 ಸಾವಿರ ಗೋವುಗಳನ್ನು ಸಂರಕ್ಷಿಸಿ ಸುಮಾರು 3 ಸಾವಿರಕ್ಕಿಂತ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ತಿಳಿಸಿದರು.

ಜಾನುವಾರು ಕ್ಷೇತ್ರದಲ್ಲಿ ವಿಪುಲ ಅವಕಾಶ: ಬಳಿಕ ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾರ್ಯದರ್ಶಿ ಡಾ.ವಿನೋದ ಭಟ್ ಅವರು ಮಾತನಾಡಿ, ಜಾನುವಾರು ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ವಿಶ್ವವಿದ್ಯಾಲಯ ಜಾನುವಾರು ಸಾಕಣೆದಾರರು ಮತ್ತು ರೈತರ ಏಳಿಗೆಗೆ ನೆರವಾಗುವ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರಾದ ಡಾ.ಎನ್.ಎಂ ದಿನೇಶ, ಭೋಜನಾಯಕ, ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ.ಕೆ ಸತ್ಯನಾರಾಯಣ, ವಿಶ್ವವಿದ್ಯಾಲಯದ ಡಾ.ಬಿ.ವಿ ಶಿವಪ್ರಕಾಶ, ಡಾ.ದಿಲೀಪಕುಮಾರ, ಡಾ.ಎನ್ ಪ್ರಕಾಶ, ಡಾ.ಎನ್.ಎ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಪಶುವೈದ್ಯಕೀಯ ಕಾಲೇಜಿನ ಡಾ.ಶ್ರೀಕೃಷ್ಣ ಇಸ್ಲೂರ್ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ, ಸಂಜೀವಕುಮಾರ ಬಸಪ್ಪ ಅವರಿಗೆ ಶ್ರೇಷ್ಟ ರೈತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಶೋಧಕರು ಮತ್ತು ವಿವಿಯ ಸಾಧಕ ಹಳೆಯ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.

ಇದನ್ನೂ ಓದಿ: ಬಸವರಾಜ ಬೊಮ್ಮಾಯಿಗೆ 40 ಪರ್ಸೆಂಟ್‌ ಕಳಂಕ ಅಂಟಿಕೊಂಡಿದೆ:ಸಿದ್ದರಾಮಯ್ಯ ಟೀಕಾ ಪ್ರಹಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.