ETV Bharat / state

ಅ. 30ರಿಂದ 19ನೇ ಕಲ್ಯಾಣ ಪರ್ವ: ಸರಳ ಪರ್ವ ಆಚರಿಸಲು ನಿರ್ಧಾರ - shri jagadguru channabasavananda swamiji

ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಲ್ಯಾಣ ಪರ್ವ ಕಾರ್ಯಕ್ರಮವನ್ನು ಮೂರು ದಿನಗಳ ಬದಲು ಎರಡು ದಿನಗಳ ಕಾಲ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನ ಶ್ರೀ ಚನ್ನಬಸವೆಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

19th kalyana parwa from october 30th
ಅ. 30ರಿಂದ 19ನೇ ಕಲ್ಯಾಣ ಪರ್ವ: ಸರಳ ಪರ್ವ ಆಚರಿಸಲು ನಿರ್ಧಾರ
author img

By

Published : Oct 28, 2020, 7:32 PM IST

ಬಸವಕಲ್ಯಾಣ: ನಗರದ ಹೊರ ವಲಯದಲ್ಲಿರುವ ಬಸವ ಮಹಾಮನೆಯಲ್ಲಿ ಅಕ್ಟೋಬರ್​​ 30 ಹಾಗೂ 31 ರಂದು ಎರಡು ದಿನಗಳ ಕಾಲ 19ನೇ ಕಲ್ಯಾಣ ಪರ್ವ ಕಾರ್ಯಕ್ರಮ ಆಯೋಜಿಸಲಾಗಿದೆಯೆಂದು ಬೆಂಗಳೂರಿನ ಶ್ರೀ ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ ತಿಳಿಸಿದರು.

ಬಸವ ಮಹಾಮನೆಯಲ್ಲಿ ಇಂದು 19ನೇ ಕಲ್ಯಾಣ ಪರ್ವದ ಸ್ವಾಗತ ಸಮಿತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂ. ಜಗದ್ಗುರು ಡಾ. ಮಾತೆ ಮಹಾದೇವಿ ಅವರ ನೇತೃತ್ವದಲ್ಲಿ ಅದ್ಧೂರಿ ಹಾಗೂ ಅರ್ಥ ಪೂರ್ಣವಾಗಿ ಕಲ್ಯಾಣ ಪರ್ವ ಸಮಾರಂಭವನ್ನು ಆಚರಿಸಿಕೊಂಡು ಬರಲಾಗುತ್ತಿತ್ತು. ಆದ್ರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವ ಜೊತೆಗೆ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಶ್ರೀ ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ

ಕಲ್ಯಾಣ ಪರ್ವದಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ರೂಪಿಸಿರುವ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತದೆ. ಬಸವ ಮಹಾಮನೆಯನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚಿಸಲಾಗುವುದು. ಕೊರೊನಾ ಹಿನ್ನೆಲೆಯಲ್ಲಿ ಈ ಸಲ ಬೇರೆ ಕಡೆ ಪ್ರಚಾರ ಕೈಗೊಂಡಿಲ್ಲ. 10 ವರ್ಷದ ಮಕ್ಕಳು ಹಾಗೂ 60 ವರ್ಷದ ಮೇಲ್ಪಟ್ಟ ವಯಸ್ಸಿನ ಜನರಿಗೆ ಕಾರ್ಯಕ್ರಮಕ್ಕೆ ಆಗಮಿಸದಂತೆ ಮನವಿ ಮಾಡಲಾಗಿದೆಯೆಂದರು.

ಇದೇ 30 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ ಜರುಗಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಬರುವ ನಿರೀಕ್ಷೆ ಇದೆ. ಸಾಯಂಕಾಲ 5ಕ್ಕೆ ರಾಷ್ಟ್ರೀಯ ಬಸವ ದಳ ಮತ್ತು ಲಿಂಗಾಯುತ ಧರ್ಮ ಮಹಾಸಭಾ ಅಧಿವೇಶನ ಜರುಗಲಿದೆ. 31 ರಂದು ಬೆಳಿಗ್ಗೆ 10-30ಕ್ಕೆ ಧರ್ಮ ಚಿಂತನಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಈ ಬಾರಿ ರಾಜಕಾರಣಿಗಳು ಸೇರಿದಂತೆ ಯಾರಿಗೂ ಅಹ್ವಾನಿಸಿಲ್ಲ. ಗಣ್ಯರು ಇಂಟರ್‌ನೆಟ್ ಮೂಲಕ ಭಾಷಣ ಮಾಡಲಿದ್ದಾರೆ. ಇದಕ್ಕೆ ಅಗತ್ಯ ಸ್ಕೀನರ್​ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಬರುವ ಭಕ್ತರಿಗೆ ತೊಂದರೆಯಾಗದಂತೆ ಮುಂಜಾಗೃತೆ ವಹಿಸಿ ಅಗತ್ಯ ಸೌಕರ್ಯಗಳು ಕಲ್ಪಿಸಲಾಗಿದೆ ಎಂದರು.

ಬಸವರಾಜ ಪಾಟೀಲ ಶಿವಪೂರ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ರೂಪಿಸಿರುವ 23 ಮಾರ್ಗಸೂಚಿಗಳನ್ನು ಪಾಲಿಸಿ ಸರಳವಾಗಿ ಕಲ್ಯಾಣ ಪರ್ವ ಆಚರಿಸಲಾಗುತ್ತಿದೆ. ಕಲ್ಯಾಣ ಪರ್ವದಲ್ಲಿ ಸ್ವಯಂ ಸೇವಕರಾಗಿ ಯುವಕರು ಕಾರ್ಯ ನಿರ್ವಹಿಸಲಿದ್ದಾರೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.