ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ಕಳೆದೆರಡು ವಾರದಲ್ಲಿ 20 ಜನರು ಸಾವನ್ನಪ್ಪಿದ್ದು, ವಿಚಿತ್ರ ರೋಗ ಬಾಧೆ ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ.
ನಾವದಗಿ ಗ್ರಾಮದಲ್ಲಿ ಮೃತಪಟ್ಟ ಒಟ್ಟು 20 ಜನರ ಪೈಕಿ ಮೂವರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿತ್ತು. ಉಳಿದ 17 ಜನರು ಕೆಮ್ಮು, ಜ್ವರ, ಶೀತದಿಂದ ಮೃತಪಟ್ಟಿದ್ದಾರೆ.
ಗ್ರಾಮದಲ್ಲಿ ಸರಣಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಮಲ್ಲಿಕಾರ್ಜುನ್ ವಡ್ಡನಕೆರೆ ಹಾಗು ತಾಲೂಕು ವೈದ್ಯಾಧಿಕಾರಿ ಡಾ.ಜ್ಞಾನೇಶ್ವರ್ ನಿರಗುಡೆ ನೇತೃತ್ವದ ಅಧಿಕಾರಿಗಳ ತಂಡ, ಸಾರ್ವಜನಿಕ ಆರೋಗ್ಯ ತಪಾಸಣೆಗೆ ಮುಂದಾಗಿದ್ದಾರೆ. ಈ ಹಿಂದೆ ಸೋಡಿಯಂ ಮಿಶ್ರಿತ ನೀರು ಕುಡಿದು ಇದೇ ಮಾದರಿಯಲ್ಲಿ ಗ್ರಾಮದಲ್ಲಿ ಸರಣಿ ಸಾವುಗಳಾಗಿದ್ದವು.
ಇದನ್ನೂ ಓದಿ: ಕಾರ್ಮಿಕರ ಠೇವಣಿ ಆಧರಿತ ವಿಮೆ ಗರಿಷ್ಠ 7 ಲಕ್ಷಕ್ಕೆ ಏರಿಕೆ: ಇಪಿಎಫ್ಓ ಹೊಸ ನೀತಿಯ ಪೂರ್ಣ ಮಾಹಿತಿ