ಬೀದರ್: ಜಿಲ್ಲೆಯಲ್ಲಿ 6 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 6,801 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಈ ದಿನ ಕೊರೊನಾದಿಂದ 50 ಜನರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರಗೆ ಒಟ್ಟು 6,478 ಮಂದಿ ಗುಣಮುಖರಾಗಿದ್ದಾರೆ.
ಇನ್ನು ಜಿಲ್ಲೆಯಲ್ಲಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 156 ಜನರು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 163 ಕ್ಕೆ ಏರಿಕೆಯಾಗಿದೆ.