ಬೀದರ್: ಮರಾಠ ಸಮುದಾಯದ ಬಹುದಿನದ ಬೇಡಿಕೆಯಾದ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು 50 ಕೋಟಿ ರೂ. ಮೀಸಲಿಡಲು ಆದೇಶ ಮಾಡಿದಕ್ಕೆ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ 50 ಕೋಟಿ ರೂ. ಮೀಸಲಿಡುವಂತೆ ಸೂಚನೆ ನೀಡಿದ್ದಾರೆ.
ಇದಷ್ಟೇ ಅಲ್ಲದೆ ಮರಾಠ ಸಮುದಾಯಕ್ಕೆ 2ಎ ಪ್ರವರ್ಗದ ಮಾನ್ಯತೆಗಾಗಿ ಕ್ರಮ ಕೈಗೊಳ್ಳಲು ಸರ್ಕಾರ ಬದ್ಧವಾಗಿದ್ದು ಸದ್ಯಕ್ಕೆ ಇರುವ 3 ಬಿ ಯಿಂದ 2 ಎ ಮಿಸಲಾತಿ ನೀಡುವಂತೆ ಸಮುದಾಯ ಒಕ್ಕೊರಿಲಿನಿಂದ ಮನವಿ ಮಾಡಿದೆ ಎಂದು ಪ್ರಭು ಚವ್ಹಾಣ ಭರವಸೆ ನೀಡಿದ್ದಾರೆ.