ಬೀದರ್: ಕೊರೊನಾ ರೌದ್ರಾವತಾರ ಮುಂದುವರೆದಿದ್ದು, ಇಂದು ಒಂದೇ ದಿನ 53 ಜನರಲ್ಲಿ ಸೋಂಕು ದೃಢವಾಗಿದೆ. ಸೋಂಕಿನಿಂದ ಬಳಲಿ ಮತ್ತೆ ಇಬ್ಬರು ವೃದ್ಧರು ಸಾವನ್ನಪ್ಪಿರುವ ವರದಿಯಾಗಿದೆ.
![Bidar](https://etvbharatimages.akamaized.net/etvbharat/prod-images/kn-bdr-01-16-coronapositive-7203280-av-01_16072020220434_1607f_1594917274_377.jpg)
ಜಿಲ್ಲೆಯಲ್ಲಿ 60 ಹಾಗೂ 65 ವಯಸ್ಸಿನ ಇಬ್ಬರು ವೃದ್ಧರು ಸಾವನ್ನಪ್ಪಿದ್ದಾರೆ. ಹುಮನಾಬಾದ್, ಬಸವಕಲ್ಯಾಣ, ಔರಾದ್, ಬೀದರ್ ಹಾಗೂ ಭಾಲ್ಕಿ ತಾಲೂಕಿನ 53 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತ ಸಂಖ್ಯೆ ,193 ಕ್ಕೆ ಏರಿಕೆಯಾಗಿದೆ. 55 ಜನರು ಬಲಿಯಾಗಿದ್ದು ಈ ಪೈಕಿ ಇಬ್ಬರು ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಹೇಳಿದ್ದಾರೆ.