ಬೀದರ್: ಜಿಲ್ಲೆಯಲ್ಲಿ ನಿನ್ನೆ 6 ಜನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 10 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ 63 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
![Bidar](https://etvbharatimages.akamaized.net/etvbharat/prod-images/kn-bdr-01-30-coronaupdatebdr-7203280-av-01_30102020234251_3010f_1604081571_871.jpg)
ಜಿಲ್ಲೆಯಲ್ಲಿ ಇಲ್ಲಿಯವರೆಗೆ 6,892 ಜನರಿಗೆ ಸೋಂಕು ತಗುಲಿದೆ. ಈ ಪೈಕಿ 6,662 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, 163 ಜನ ಸಾವನ್ನಪ್ಪಿದ್ದಾರೆ ಎಂದು ಕೊರೊನಾ ಬುಲೆಟಿನ್ನಲ್ಲಿ ತಿಳಿಸಲಾಗಿದೆ.