ಬೀದರ್: ಮಹಾಮಾರಿ ಕೊರೊನಾ ಸೋಂಕಿಗೆ ಇಂದು 9 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಕೊರೊನಾ ಕೆಂಗಣ್ಣು ಜಿಲ್ಲೆಯ ಮೇಲೆ ಬಿದ್ದಿದ್ದು, ಸೋಂಕಿನಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 37ಕ್ಕೆ ಏರಿದೆ. ಜಿಲ್ಲೆಯಾದ್ಯಂತ ಇಂದು 29 ಹೊಸ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 755ಕ್ಕೆ ತಲುಪಿದೆ.
32 ಜನರು ಇಂದು ಸೋಂಕಿನಿಂದ ಗುಣಮುಖರಾಗಿದ್ದರೆ, ಈವರೆಗೆ ಒಟ್ಟು 532 ಜನರು ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 41,086 ಜನರ ಗಂಟಲು ದ್ರವದ ಮಾದರಿ ಪರೀಕ್ಷೆ ಮಾಡಲಾಗಿದ್ದು, 37,058 ಜನರ ವರದಿ ನೆಗೆಟಿವ್ ಬಂದಿದೆ. ಈ ಪೈಕಿ ಇನ್ನೂ 3,273 ಜನರ ಪರೀಕ್ಷಾ ವರದಿ ಬರಬೇಕಿದೆ.