ಬಸವಕಲ್ಯಾಣ: ಕಿಡ್ನಿ ವೈಲ್ಯದಿಂದ ಬಳಲುತಿದ್ದ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕೋಹಿನೂರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಬಸವರಾಜ ಖಸಗೆ (35 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೆಲ ತಿಂಗಳುಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತಿದ್ದ ಈತ ಬೆಂಗಳೂರಿಗೆ ತೆರಳಿ ಚಿಕಿತ್ಸೆ ಪಡೆಯುತಿದ್ದ. ಆದರೆ ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಕುಟುಂಬದವರಿಂದ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.