ಬೀದರ್: ಹಳೇ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ದೊಣ್ಣೆಯಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಗರದ ವಿದ್ಯಾನಗರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಳ್ಳುರು ಗ್ರಾಮದ ನಿವಾಸಿ ಮಾರುತಿ (40) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮೃತ ಮಾರುತಿ ನಗರದ ಎಪಿಎಂಸಿಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೊಲೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್. ಭೇಟಿ ನೀಡಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.