ಬಸವಕಲ್ಯಾಣ: ಪಟ್ಟಣದ ಹೊರವಲಯದ ಎಂ.ಕೆ.ಪಾರಶೇಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಳಿ ಬಸ್ ತಂಗುದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಸ್ಥಳೀಯ ಘಟಕ ಒತ್ತಾಯಿಸಿದೆ.
ಎಬಿವಿಪಿ ಪದಾಧಿಕಾರಿಗಳ ನಿಯೋಗದಿಂದ ಶಾಸಕ ಬಿ.ನಾರಾಯಣರಾವ್ ಅವರನ್ನು ಭೇಟಿ ಮಾಡಿ, ಬಸ್ ತಂಗುದಾಣ ನಿರ್ಮಾಣಕ್ಕೆ ಅನುದಾನ ಕಲ್ಪಿಸಬೇಕು ಎಂದು ಮನವಿ ಪತ್ರ ಸಲ್ಲಿಸಲಾಯಿತು.
ಹುಲಸೂರು ಪ್ರಥಮ ದರ್ಜೆ ಕಾಲೇಜಿನಲ್ಲಿ ದಿನದಿಂದ ದಿನಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ, ಗ್ರಾಮೀಣ ಭಾಗದಿಂದ ಬರುವ ಬಡ ವಿದ್ಯಾರ್ಥಿಗಳು ಬಸ್ ತಂಗುದಾಣವಿಲ್ಲದೆ ಸುಡು ಬಿಸಿಲು, ಮಳೆಯಲ್ಲಿ ನಿಂತು ಬಸ್‌ಗಾಗಿ ಕಾಯುತ್ತಿದ್ದಾರೆ. ಬಸ್ ತಂಗುದಾಣ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಕೆಲ ದಿನಗಳ ಹಿಂದೆ ಪರಿಷತ್‌ನಿಂದ ತಮಗೆ ಮನವಿ ಪತ್ರ ಸಲ್ಲಿಸಲಾಗಿತ್ತು.
ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಮತ್ತು ಪ್ರಮುಖರು, ಇನ್ನು ಮುಂದಾದ್ರೂ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.