ETV Bharat / state

ಬೀದರ್ ಜಿಲ್ಲಾ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ: ಸಚಿವ ಕಾರಜೋಳ - ಶಾಸಕ ಈಶ್ವರ ಖಂಡ್ರೆ

ಶಾಸಕ ಈಶ್ವರ ಖಂಡ್ರೆಯವರ ಪ್ರಶ್ನೆಗೆ ಉತ್ತರಿಸಿದ ಸಚಿವ ಗೋವಿಂದ ಕಾರಜೋಳ, ಬೀದರ್ ಜಿಲ್ಲೆಯ 3 ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆರ್ಥಿಕ ಇಲಾಖೆಯ ಸಹಮತಿ ಪಡೆದು ಪ್ರಯತ್ನಿಸಲಾಗುವುದು ಎಂದರು.

ಬೀದರ್ ಜಿಲ್ಲಾ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ

author img

By

Published : Sep 14, 2021, 5:34 PM IST

ಬೆಂಗಳೂರು: ಬೀದರ್ ಜಿಲ್ಲೆಯ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಈಶ್ವರ ಖಂಡ್ರೆಯವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೀದರ್ ಜಿಲ್ಲೆಯ 3 ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಆರ್ಥಿಕ ಇಲಾಖೆಯ ಸಹಮತಿ ಪಡೆದು ಪ್ರಯತ್ನಿಸಲಾಗುವುದು ಎಂದರು.

ನೀರಾವರಿ ಇಲಾಖೆಯು ಸಿದ್ಧಪಡಿಸಿದ ವಿಸ್ತೃತ ಯೋಜನಾ ವರದಿಯಂತೆ 647 ಕೋಟಿ ರೂ. ಅಂದಾಜು ಮಾಡಲಾಗಿತ್ತು. 2019-20ನೇ ಸಾಲಿನ ಮುಂಗಡ ಪತ್ರದಲ್ಲಿ ಬಸವಕಲ್ಯಾಣ ಮತ್ತು ಭಾಲ್ಕಿ ತಾಲೂಕಿನ ಜಮೀನುಗಳಿಗೆ ನೀರಾವರಿ ಒದಗಿಸುವ ಹಾಗೂ ಕೆರೆ ತುಂಬಿಸುವ ಬೀದರ್ ನಗರ ವ್ಯಾಪ್ತಿಯಲ್ಲಿ ಬರುವ ಕೆರೆಗಳನ್ನು ಮಾಂಜ್ರಾ ನದಿಯಿಂದ ನೀರು ತುಂಬಿಸುವ ಮತ್ತು ಕಾರಂಜಾ ಎಡದಂಡೆ ಮತ್ತು ಬಲದಂಡೆ ಯೋಜನೆಗಳಿಗೆ ತಲಾ 75 ಕೋಟಿ ರೂ. ಅನುದಾನ ನೀಡಿ ಸಾಂಕೇತಿಕವಾಗಿ ಘೋಷಣೆ ಮಾಡಲಾಗಿತ್ತು ಎಂದು ಸಚಿವರು ತಿಳಿಸಿದರು.

ಬೀದರ್ ಜಿಲ್ಲಾ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ- ಸಚಿವ ಕಾರಜೋಳ

ಮಾಂಜ್ರಾ ನದಿಯಿಂದ ನೀರು ಎತ್ತುವಳಿ ಮಾಡಿ ಭಾಲ್ಕಿ ತಾಲೂಕಿನ ಸುಮಾರು 10,880 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸುವ ಮೆಹಕರ ಏತ ನೀರಾವರಿ ಯೋಜನೆಗೆ 700 ಕೋಟಿ ರೂ. ಯೋಜನಾ ವರದಿ ತಯಾರಿಸಲಾಗಿದೆ. ಈ ಯೋಜನೆ ಸರ್ಕಾರದ ವಿವಿಧ ಹಂತಗಳಲ್ಲಿ ಪರಿಶೀಲನೆಯಲ್ಲಿದೆ ಎಂದರು.

ಬೀದರ್​ ಜಿಲ್ಲೆ ಸೇರಿದಂತೆ ಯಾವುದೇ ಜಿಲ್ಲೆಯನ್ನೂ ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಎಲ್ಲಾ ಜಿಲ್ಲೆಗಳನ್ನು ಸಮಾನ ದೃಷ್ಟಿಕೋನದಿಂದ ಪರಿಗಣಿಸಲಾಗುವುದು ಎಂದು ಉತ್ತರಿಸಿದರು.

ಸ್ವರ್ಣಾ ನದಿ ನೀರು ಸದ್ಭಳಕೆಗೆ ಕ್ರಮ:

ಉಡುಪಿ ಜಿಲ್ಲೆಯ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡುಪಿ ತಾಲೂಕಿನಲ್ಲಿ ಹರಿಯುವ ಸ್ವರ್ಣ ನದಿಯ ನೀರನ್ನು ಸದುಪಯೋಗಪಡಿಸಿಕೊಳ್ಳಲು 165 ಕೋಟಿ ರೂ. ವಿಸ್ತೃತ ಯೋಜನಾ ವರದಿ ಸಿದ್ಧವಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಯೋಜನೆ ಕೈಗೆತ್ತಿಗೊಳ್ಳಲು ಉದ್ದೇಶಿಸಲಾಗಿದೆ ಎಂದು ಸಚಿವ ಕಾರಜೋಳ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.