ETV Bharat / state

ಶಾಸಕ ಬಂಡೆಪ್ಪ ಕಾಶೆಂಪುರ್ ಸಮ್ಮುಖದಲ್ಲಿ ಜೆಡಿಎಸ್ ಸೇರಿದ ವಿವಿಧ ಪಕ್ಷಗಳ ಕಾರ್ಯಕರ್ತರು

ಮುಂಬರುವ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದ ಶಕ್ತಿಯನ್ನು ಇನ್ನಷ್ಟು ವೃದ್ಧಿಸುವ ಮೂಲಕ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಕಾಶೆಂಪುರ್ ಹೇಳಿದರು.

Activists of various parties joins to JDS party
ಮುಂಬರುವ ಚುನಾವಣೆಯಲ್ಲಿ ಜಾತ್ಯಾತೀತ ಜನತಾದಳ ಪಕ್ಷದ ಶಕ್ತಿಯನ್ನು ಇನ್ನಷ್ಟು ವೃದ್ಧಿಸುವ ಮೂಲಕ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಬೇಕಾಗಿದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.
author img

By

Published : Dec 17, 2022, 5:31 PM IST

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಚಾಂಗಲೇರಾ, ಮುತ್ತಂಗಿ ಸೇರಿದಂತೆ ವಿವಿಧ ಗ್ರಾಮ ಮತ್ತು ಪಕ್ಷಗಳ ಕಾರ್ಯಕರ್ತರು ಶಾಸಕ ಬಂಡೆಪ್ಪ ಕಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ಬೆಳಗ್ಗೆ ಜೆಡಿಎಸ್ ಶಾಲು ಹೊದಿಸುವ ಮೂಲಕ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು‌.

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಕಾಶೆಂಪುರ್ ರವರು ಮುಂಬರುವ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಪಕ್ಷದ ಶಕ್ತಿಯನ್ನು ಇನ್ನಷ್ಟು ವೃದ್ಧಿಸುವ ಮೂಲಕ ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಸರ್ಕಾರ ರಚನೆ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಶ್ರಮವಹಿಸಬೇಕು. ನಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿದ್ದೇವೆ. ಆ ಬಗ್ಗೆ ನಾಡಿನ ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದರು.

ನಂತರ ಮಾತನಾಡಿ ಮುಂಬರುವ ದಿನಗಳಲ್ಲಿ ಅಧಿಕಾರಕ್ಕೆ ಬಂದಾಗ ಏನೆಲ್ಲ ಕೆಲಸಗಳನ್ನು ಮಾಡುತ್ತೇವೆ ಎಂಬುದನ್ನು ಕೂಡ ಪ್ರತಿಯೊಬ್ಬರಿಗೂ ತಿಳಿಸಿ ಹೇಳಬೇಕು. ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ತಳ ಹಂತದಿಂದ ಪಕ್ಷ ಸಂಘಟನೆ ಮಾಡಬೇಕು ಎಂದು ನೂತನ ಕಾರ್ಯಕರ್ತರಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ತಿಳಿಸಿದರು.

ಈ ಸಂದರ್ಭದಲ್ಲಿ ಚಾಂಗಲೇರಾ ಗ್ರಾಮದ ನೂತನ ಜೆಡಿಎಸ್ ಕಾರ್ಯಕರ್ತರಾದ ಗ್ರಾಮ ಪಂಚಾಯಿತಿ ಸದಸ್ಯ ಕಂಟೆಪ್ಪ, ಪ್ರಮುಖರಾದ ಸಫಿ ಬುಕ್ಕಿಗಾರ್, ನರೇಶ ಪೂಜಾರಿ, ಓಂಕಾರ್, ಸಾಯಿರೆಡ್ಡಿ, ದಿನೇಶ್, ಮಲ್ಲಪ್ಪ ಪೂಜಾರಿ, ಆನಂದ ಹೂಗಾರ, ಈರಪ್ಪ, ನರಸಪ್ಪ ಮಡಿವಾಳ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ:ಬೀದರ್​​: ಕಾಡಿನಿಂದ ನಾಡಿಗೆ ಬಂದ ಜಿಂಕೆ ಮರಿ‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.