ETV Bharat / state

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್ ನಿರ್ನಾಮ: ಅರುಣ್ ಸಿಂಗ್

author img

By

Published : Apr 12, 2021, 7:05 AM IST

ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ದೇಶದಿಂದ ಕಾಂಗ್ರೆಸ್ ಪಕ್ಷ ಕಾಣೆಯಾಗಲಿದೆ ಎಂದು ಬಸವಕಲ್ಯಾಣದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

BJP State Incharge Arun Singh  news conference
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸುದ್ದಿಗೋಷ್ಠಿ

ಬಸವಕಲ್ಯಾಣ (ಬೀದರ್): ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿಎಸ್‌ವೈ ನೇತೃತ್ವದ ಬಿಜೆಪಿ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಎಲ್ಲಾ ವರ್ಗದ ಹಿತ ಕಾಪಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ ಮಾನವೀಯ ಸಂದೇಶ ಸಾರಿದ ಇಲ್ಲಿಯ ಶರಣರ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ 500 ಕೋಟಿ ರೂ. ಘೋಷಿಸಲಾಗಿದೆ. ಮರಾಠ ಅಭಿವೃದ್ದಿ ನಿಗಮ ಸ್ಥಾಪಿಸುವ ಮೂಲಕ ಮರಾಠ ಸಮಾಜದ ಜನರ ಅಭಿವೃದ್ದಿಗೆ ಆದ್ಯತೆ ನೀಡಲಾಗಿದೆ ಎಂದರು.

ದೇಶಾದ್ಯಂತ ಕಾಂಗ್ರೆಸ್ ಪಕ್ಷದ ವರ್ಚಸ್ಸು ಕಡಿಮೆಯಾಗುತ್ತಿದೆ. ಹೀಗಾಗಿ, ಕ್ಷೇತ್ರದ ಮತದಾರರು ಬಿಜೆಪಿಯ ಜೊತೆಗಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಕೈಜೋಡಿಸಲಿದ್ದಾರೆ. ಪ್ರಧಾನಿ ಮೋದಿ ಅವರು ಜನಧನ್ ಖಾತೆ ತೆಗೆದು ಬಡವರ ಹಾಗೂ ರೈತರಿಗೆ ನೆರವಾಗಿದ್ದಾರೆ. ಮೋದಿ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಕ್ಷೇತ್ರದ ಎಲ್ಲಾ ಬೂತ್‌ಗಳಲ್ಲಿಯೂ ಬಿಜೆಪಿಗೆ ಲೀಡ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ,ಡಿಕೆಶಿಗೆ ಬೇರೆ ಪಕ್ಷದವರನ್ನು ಟೀಕಿಸುವ ಚಟ: ಡಿವಿಎಸ್

ಕೇಂದ್ರ ಸಚಿವ ಸದಾನಂದ ಗೌಡ ಮಾತನಾಡಿ, ಚುನಾವಣೆಯ ಪೂರ್ವದಲ್ಲಿ ಬಿಜೆಪಿ ನೀಡಿದ ಭರವಸೆಗಳನ್ನು ಬಹುತೇಕ ಪೂರ್ಣಗೊಳಿಸಲಾಗಿದೆ. ಉತ್ತಮ ಆಡಳಿತದ ಜೊತೆಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದಾರೆ. ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದರೆ, ಉಳಿದ ಎರಡು ವರ್ಷದ ಅವಧಿಯಲ್ಲಿ ಕ್ಷೇತ್ರವನ್ನು ಪ್ರಧಾನಿ ಮೋದಿ ಅವರ ಶೈಲಿಯಲ್ಲಿ ಸಂಪೂರ್ಣವಾಗಿ ಅಭಿವೃದ್ದಿಪಡಿಸಲಾಗುವುದು ಎಂದರು.

ಕೇಂದ್ರ ಸಚಿವ ಡಿವಿಎಸ್

ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರಿಗೆ ಬೇರೆ ಪಕ್ಷದವರನ್ನು ಟೀಕಿಸುವ ಚಟ ಹೆಚ್ಚಾಗಿದೆ. ಅವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಡಿಕೆಶಿ ಮತ್ತು ಸಿದ್ದು ಮಧ್ಯದಲ್ಲಿ ಇರುವ ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು ಬೇರೆಯವರ ಬಗ್ಗೆ ಮಾತನಾಡಲಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಆಲೂರು ರೇವ್​ ಪಾರ್ಟಿಯಲ್ಲಿ ಭಯಾನಕ ಡ್ರಗ್ಸ್​​ ಬಳಕೆ.. ಎಸ್ಪಿ ಹೀಗಂದರು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.