ಬೀದರ್: ಹುಮುನಾಬಾದ ತಾಲ್ಲೂಕಿನ ಘಾಟಬೋರಳ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ಇಬ್ಬರು ಆರೋಪಿಗಳನ್ನು ಸಿಪಿಐ ಪೊಲೀಸರು ಬಂಧಿಸಿದ್ದಾರೆ. ವಿಶಾಲ ಮೂಳೆ ಹಾಗೂ ಸುನೀಲ ಔಟೆ ಬಂಧಿತರು. ಇಬ್ಬರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನವೆಂಬರ್ 27 ರಂದು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶರಣಬಸಪ್ಪ ಕೋಡ್ತಾ, ಪಿಎಸ್‌ಐ ಮಂಜನಗೌಡ ಪಾಟೀಲ ತನಿಖೆ ನಡೆಸಿದ್ದರು. ಗ್ರಾಮದಲ್ಲಿನ ಸರ್ಕಾರಿ ಆಸ್ಪತ್ರೆ ಹಾಗೂ ಮದ್ಯದ ಅಂಗಡಿಯಲ್ಲಿನ ಸಿಸಿ ಕ್ಯಾಮರಾಗಳನ್ನು ಪೊಲೀಸರು ಪರಿಶೀಲಿಸಿದ್ದರು. ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬೀದರ್: ಅಂಬೇಡ್ಕರ್ ಭಾವಚಿತ್ರಕ್ಕೆ ದುಷ್ಕರ್ಮಿಗಳಿಂದ ಅವಮಾನ