ಬೀದರ್: ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದ ಓಂ ರಾಸಾಯನಿಕ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿ, ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಅಗ್ನಿ ಶಾಮಕ ದಳ ಬೆಂಕಿ ನಂದಿಸಲು ಹರಸಾಹಸಪಟ್ಟರೂ ಬೆಂಕಿ ಹತೋಟಿಗೆ ಬಂದಿಲ್ಲ. ಬೆಳಗಿನ ಜಾವ ಈ ಅವಘಡ ಸಂಭವಿಸಿರುವುದರಿಂದ ಕಾರ್ಮಿಕರಾಗಲಿ, ಸಿಬ್ಬಂದಿಗಳಾಗಲಿ ಯಾರು ಕಾರ್ಖಾನೆಯಲ್ಲಿ ಇರದ ಕಾರಣ ಭಾರೀ ಅನಾಹುತ ತಪ್ಪಿದೆ.
ಈ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.