ಬಸವಕಲ್ಯಾಣ : ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ನಗರದ ಮಿನಿ ವಿಧಾನಸೌಧದ ಬಳಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಸಾವಿತ್ರಿ ಸಲಗರ್ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಕೊರೊನಾ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯೊಂದಿಗೆ ಆಶಾ ಕಾರ್ಯಕರ್ತೆಯರು ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತಿದ್ದಾರೆ. ಆದರೆ, ನಮಗೆ ಸರ್ಕಾರದಿಂದ ಯಾವುದೇ ಸುರಕ್ಷತಾ ಪರಿಕರಗಳು ನೀಡಿಲ್ಲ ಎಂದು ಆರೋಪಿಸಿದರು.
ಮಾಸಿಕ ಗೌರವಧನ ₹12 ಸಾವಿರ ವೇತನ ನೀಡಬೇಕು. ಮಾಸ್ಕ್, ಸ್ಯಾನಿಟೈಸರ್, ಹ್ಯಾಂಡ್ ಗ್ಲೋಸ್ ಸೇರಿ ಇತರ ಅಗತ್ಯ ಸುರಕ್ಷತಾ ವಸ್ತುಗಳನ್ನು ನೀಡಬೇಕು. ಬೇಡಿಕೆಗಳನ್ನು ಈಡೇರಿಸುವಂತೆ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ಬೇಡಿಕೆಗಳಿಗೆ ಈವರೆಗೂ ಸರ್ಕಾರ ಸ್ಪಂದಿಸಿಲ್ಲ. ಈಗಲಾದ್ರೂ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.