ಬೀದರ್: ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಗಂಗಾ ಶಾಲೆಯ ಮೇಲೆ ದಾಳಿ ನಡೆಸಿದ ಪೊಲೀಸರು ಟಾಟಾ ಗೂಡ್ಸ್ ವಾಹನದಲ್ಲಿ ಸಾಗಣೆ ಮಾಡುತ್ತಿದ್ದ 2.71 ಲಕ್ಷ ರೂಪಾಯಿ ಮೌಲ್ಯದ ಮದ್ಯ ಹಾಗೂ 1.17 ಲಕ್ಷ ನಗದು ಜಪ್ತಿ ಮಾಡಲಾಗಿದೆ.
ಈ ಸಂಬಂಧ ವಿಠಲ್ ಡೋಳೆಕರ, ಅನಂತ ಗಂಗಾ ಹಾಗೂ ವೀರೇಶ ಮಲ್ಲಪ್ಪ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯಲ್ಲಿ ಡಿವೈಎಸ್ ಪಿ ಮಹೇಶ್ವರಪ್ಪ, ಸಿಪಿಐ ನ್ಯಾಮೇಗೌಡ ಹಾಗೂ ಪಿಎಸ್ಐ ಮಹಾಂತೇಶ ಸೇರಿದಂತೆ ಸಿಬ್ಬಂದಿ ಇದ್ದರು.
ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.