ETV Bharat / state

ಶಾಹಿನ್ ಶಾಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ: ಕೋರ್ಟ್​ನಿಂದ ಇಂದು ಆದೇಶ ಪ್ರಕಟ ಸಾಧ್ಯತೆ

author img

By

Published : Feb 14, 2020, 10:08 AM IST

ಶಾಲಾ ವಾರ್ಷಿಕೋತ್ಸವದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ಪ್ರದರ್ಶಿಸಲಾಗಿದ್ದ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಅವಮಾನಿಸಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಶಿಕ್ಷಕಿ ಹಾಗೂ ವಿದ್ಯಾರ್ಥಿನಿ ತಾಯಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯ ಇಂದು ಆದೇಶ ಪ್ರಕಟಿಸುವ ಸಾಧ್ಯತೆ ಇದೆ.

Shaheen school case
ಶಾಹಿನ್ ಶಾಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ

ಬೀದರ್: ನಗರದ ಶಾಹೀನ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದರ್ಶಿಸಿದ್ದ ಸಿಎಎ ವಿರೋಧಿ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಪದಗಳನ್ನು ಬಸಿರುವ ಆರೋಪದ ಮೇಲೆ ಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿವೋರ್ವಳ ತಾಯಿ ನಜಬುನ್ನಿಸಾ ವಿರುದ್ಧ ಪ್ರಕರಣ ದಾಖಲಿಸಿ ಬಳಿಕ ಬಂಧಿಸಲಾಗಿತ್ತು. ಈ ಬಗ್ಗೆ ಜಾಮೀನು ಕೋರಿ ಇಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಜಾಮೀನು ಅರ್ಜಿ ಆದೇಶ ಇಂದು ಪ್ರಕಟವಾಗುವ ಸಾಧ್ಯತೆ ಇದೆ.

ಶಾಹಿನ್ ಶಾಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ: ಇಂದು ತೀರ್ಪು ಪ್ರಕಟವಾಗುವ ಸಾಧ್ಯತೆ

ನೀತಿ ಭ್ರಷ್ಟತೆ ಅಥವಾ ತಪ್ಪು ದಾರಿಗೆ ಎಳೆಯುವಿಕೆ ಆರೋಪದಲ್ಲಿ ಬಂಧನದಲ್ಲಿರುವ ಮುಖ್ಯ ಶಿಕ್ಷಕಿ ಹಾಗೂ ಬಾಲಕಿಯ ತಾಯಿಯ ಜಾಮೀನು ಅರ್ಜಿಯ ಮತ್ತಷ್ಟು ವಿಚಾರಣೆಯಾಗುವ ಸಾಧ್ಯತೆ ಇದೆ. ನಗರದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಕಳೆದ ಫೆ.11 ರಂದು ವಾದ ಪ್ರತಿವಾದ ನಡೆದು ನ್ಯಾಯಾಧೀಶರಾದ ಮನಗೂಳಿ ಪ್ರೇಮಾವತಿ ಅವರು ಜಾಮೀನು ಅರ್ಜಿಯ ಆದೇಶವನ್ನು ಫೆ. 14(ಇಂದು) ಗೆ ಕಾಯ್ದಿರಿಸಿದ್ದರು.

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ:

ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿಕ್ಷಕಿ ಹಾಗೂ ಬಾಲಕಿಯ ತಾಯಿಯನ್ನು ಇಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಶಾಹಿನ್​ ಶಾಲೆಯಲ್ಲಿ ವಿದ್ಯಾರ್ಥಿನಿ ಹಾಗೂ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಗಳನ್ನ ಭೇಟಿ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.