ಬೀದರ್/ನಾಂದೇಡ: ಬಂಜಾರಾ ಸಮುದಾಯದ ಧರ್ಮಗುರು ಶ್ರೀ ರಾಮರಾವ್ ಮಹಾರಾಜರ ಆರೋಗ್ಯ ಸ್ಥಿರವಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಹೇಳಿದರು.
ಮಹಾರಾಷ್ಟ್ರದ ನಾಂದೇಡ ಜಿಲ್ಲೆಯ ಪುಸದ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ರಾಮರಾವ್ ಮಹಾರಾಜರ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದ ಸಚಿವ ಪ್ರಭು ಚವ್ಹಾಣ ನಂತರ ಶ್ರೀಗಳ ಆರೋಗ್ಯ ಸ್ಥೀರವಾಗಿದೆ ಎಂದು ಹೇಳಿದರು.
ಶ್ರೀ ರಾಮರಾವ್ ಮಹಾರಾಜರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಲವು ರಾಜ್ಯದಲ್ಲಿರುವ ಅವರ ಭಕ್ತರು ಆತಂಕಕ್ಕೀಡಾಗಿದ್ದರು. ಹೀಗಾಗಿ ಸಚಿವ ಪ್ರಭು ಚವ್ಹಾಣ ಅವರು ಕೂಡ ರಾಮರಾವ್ ಮಹಾರಾಜರ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಸಚಿವರ ಕಾರ್ಯಾಲಯದಿಂದ ಹೊರಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.