ಬಸವಕಲ್ಯಾಣ: ನಗರ ಸೇರಿದಂತೆ ನೆರೆ ರಾಜ್ಯಗಳಿಂದ ಬೈಕ್‌ಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರು ಅಂತಾರಾಜ್ಯ ಬೈಕ್ ಕಳ್ಳರನ್ನು ಬಂಧಿಸಿ, 9 ಬೈಕ್‌ಗಳನ್ನು ಜಪ್ತಿ ಮಾಡಿಕೊಳ್ಳುವಲ್ಲಿ ನಗರ ಠಾಣೆ ಪೊಲೀಸರ ತಂಡ ಯಶಸ್ವಿಯಾಗಿದೆ.
ತಾಲೂಕಿನ ಬೇಲೂರ ಗ್ರಾಮದ ನಾಗೇಶ ಶಿವರಾಜ ಭೋಗೆ ಹಾಗೂ ಭೀಮಣ್ಣ ರಮೇಶ್ ಭೋಗೆ ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ಶಂಕರ ಎನ್ನುವಾತ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಳು ಬಸವಕಲ್ಯಾಣ ನಗರ ಸೇರಿದಂತೆ ನೆರೆ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶದ ವಿವಿಧೆಡೆ ಬೈಕ್‌ಗಳನ್ನು ಕಳವು ಮಾಡಿ ಬಸವಕಲ್ಯಾಣ ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಎಸ್ಪಿ ಡಿಎಲ್ ನಾಗೇಶ, ಎಎಸ್ಪಿ ಡಾ. ಗೋಪಾಲ ಬ್ಯಾಕೋಡ, ಹುಮನಾಬಾದ ಡಿವೈಎಸ್ಪಿ ಸೋಮಲಿಂಗ ಕುಂಬಾರ ಮಾರ್ಗದರ್ಶನದಲ್ಲಿ ಸಿಪಿಐ ಜೆ.ಎಸ್.ನ್ಯಾಮಗೌಡರ್, ನಗರ ಠಾಣೆ ಪಿಎಸ್‌ಐ ಗುರು ಪಾಟೀಲ್ ಹಾಗೂ ಹುಲಸೂರ ಪಿಎಸ್‌ಐ ಗೌತಮ್, ವಿಶ್ವರಾಧ್ಯ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡದಿಂದ ಕಾರ್ಯಾಚರಣೆ ನಡೆಸಿ ಖಚಿತ ಮಾಹಿತಿ ಮೆರೆಗೆ ಹುಲಸೂರ ಪಟ್ಟಣದಲ್ಲಿ ಒಡಾಡುತಿದ್ದ ಇಬ್ಬರು ಅಂತಾರಾಜ್ಯ ಬೈಕ್ ಕಳ್ಳರನ್ನು ಬಂಧಿಸಿದೆ.
ಬಂಧಿತರಿಂದ 7 ಲಕ್ಷ ರೂ. ಮೌಲ್ಯದ 9 ಬೈಕ್‌ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಈ ಪೈಕಿ ಒಂದು ಬೈಕ್ ಬಸವಕಲ್ಯಾಣ ನಗರದಲ್ಲಿ ಕಳವು ಮಾಡಿದ್ದು, ಉಳಿದ 8 ಬೈಕ್‌ಗಳು ಹೈದರಾಬಾದ್‌ನಲ್ಲಿ ಕಳವು ಮಾಡಿರುವುದಾಗಿ ತಿಳಿದು ಬಂದಿದೆ. ಈ ಕುರಿತು ಹುಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.