ಬೀದರ್: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 23 ಜನರಲ್ಲಿ ಸೋಂಕು ಕಂಡು ಬಂದಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,061ಕ್ಕೆ ಏರಿಕೆಯಾಗಿದೆ.
ಜಿಲ್ಲೆಯ ಹುಮನಾಬಾದ್, ಔರಾದ್ ಹಾಗೂ ಭಾಲ್ಕಿ ತಾಲೂಕಿನಲ್ಲಿರುವವರಲ್ಲಿ ಸೋಂಕು ಧೃಡವಾಗಿದೆ. ಸೋಂಕಿತರಿಗೆ ಬ್ರೀಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಲ್ಲಿಯವರೆಗೆ 612 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಮಹಾಮಾರಿ ಕೊರೊನಾಗೆ 53 ಜನ ಬಲಿಯಾಗಿದ್ದಾರೆ.