ಬೀದರ್: ಜಿಲ್ಲೆಯಲ್ಲಿ ಶನಿವಾರ ಮತ್ತೆ 3 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಕೊರೊನಾ ವೈರಾಣು ಸೋಂಕಿನ ನಿನ್ನೆಯವರೆಗಿನ ಮಾಹಿತಿ ಇಂತಿದೆ.
ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕಿತರ ಪತ್ತೆ ನಿರೀಕ್ಷೆಗೂ ಮೀರಿ ಕಡಿಮೆಯಾಗಿದ್ದು, ಇಂದು 5 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದ್ರೆ ಮತ್ತೆ ಮೂವರಲ್ಲಿ ಸೋಂಕು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,895 ಕ್ಕೆ ಏರಿಕೆಯಾದ್ರೆ, 6,667 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅಲ್ಲದೆ 61 ಸಕ್ರಿಯ ಪ್ರಕರಣಗಳಿದ್ದು, 163 ಜನರು ಸಾವನ್ನಪ್ಪಿದ್ದಾರೆ.