ಬೀದರ್: ಕೊರೊನಾ ವಿರುದ್ಧದ ಸಮರ ಜಿಲ್ಲೆಯಲ್ಲಿ ಮುಂದುವರೆದಿದ್ದು, ನಿನ್ನೆ ಒಂದೇ ದಿನ 96 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹೊಸದಾಗಿ 63 ಜನರಲ್ಲಿ ಸೋಂಕು ಕಂಡುಬಂದಿದೆ.
![ಕೊರೊನಾ ಬುಲೆಟಿನ್](https://etvbharatimages.akamaized.net/etvbharat/prod-images/kn-bdr-04-01-coronaupdate-7203280av-01_01092020215247_0109f_1598977367_809.jpg)
ಜಿಲ್ಲೆಯ ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ, ಔರಾದ್ ಹಾಗೂ ಬೀದರ್ ತಾಲೂಕಿನಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಆದ್ರೆ ಸೋಂಕಿತರು ಗುಣಮುಖರಾಗ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿರುವುದು ಸಂತಸದ ಸಂಗತಿಯಾಗಿದೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 3935 ಕ್ಕೆ ಏರಿಕೆಯಾಗಿದೆ. 4603 ಜನ ಸೋಂಕಿತರಾಗಿದ್ದು, ಇಲ್ಲಿಯವರೆಗೆ 135 ಜನರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೊರೊನಾ ಬುಲೆಟಿನ್ನಲ್ಲಿ ತಿಳಿಸಲಾಗಿದೆ.