ಬೀದರ್: ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತಿಗಳ ಹಾಲಿ ಸದಸ್ಯರ ಅವಧಿ ಮುಗಿದ ಹಿನ್ನೆಲೆಯಲ್ಲಿ ಪಂಚಾಯತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಆದೇಶ ಹೊರಡಿಸಿದ್ದಾರೆ. ಅವಧಿ ಮುಗಿದ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವ ಸರ್ಕಾರದ ಆದೇಶದನ್ವಯ ಜಿಲ್ಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ ರಾಜ್ ಅಧಿನಿಯಮ 1993 ಪ್ರಕರಣ 8(i)(ಬಿ)(ii) ರನ್ವಯ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳ ನೇಮಕ ಮಾಡಿದ್ದಾರೆ.
ಪಂಚಾಯಿತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ಹಾಗೂ ಅಗಸ್ಟ್ ತಿಂಗಳಲ್ಲಿ ಮುಕ್ತಾಯಗೊಳ್ಳಲಿದ್ದು ಸಂಬಂಧಿಸಿದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರದ ಆದೇಶದಂತೆ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದ್ದು ಅಭಿವೃದ್ಧಿ ಹಾಗೂ ಕಾರ್ಯಚಟುವಟಿಕೆಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಆಡಳಿತಾಧಿಕಾರಿಗಳನ್ನು ಈ ಕೆಳಗಿನಂತೆ ತಾಲೂಕುವಾರು ನೇಮಕ ಮಾಡಲಾಗಿದೆ:











