ಬೀದರ್: ಬ್ಯಾಂಕ್ವೊಂದರ ಎಟಿಎಂ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ನಗರದ ನೌಬಾದ್ ಬಳಿಯ ಕೆನರಾ ಬ್ಯಾಂಕ್ ಎಟಿಎಂನಲ್ಲಿ ನಡೆದಿದೆ.
ತಡರಾತ್ರಿ ಯಾರೂ ಇಲ್ಲದ ವೇಳೆಯಲ್ಲಿ ನೌಬಾದ್ ಬಳಿಯ ಕೆನರಾ ಬ್ಯಾಂಕ್ ಎಟಿಎಂಗೆ ನುಗ್ಗಿದ ದರೋಡೆಕೋರರು ರಾಡ್‌ನಿಂದ ಎಟಿಎಂ ಒಡೆದು ಕಳ್ಳತನ ಯತ್ನ ಮಾಡಿ ವಿಫಲರಾಗಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗೋಪಾಲ್, ಡಿವೈಎಸ್ಪಿ ಬಸವೇಶ್ವರ ಹೀರಾ ಹಾಗೂ ಪಿಎಸ್ಐ ಗುರು ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ್ ಬ್ಯಾಂಕ್‌ನ ಜೆಸಿಬಿ ಮೂಲಕ ಕಳ್ಳತನ ಮಾಡಲು ಹೋಗಿ ವಿಫಲ ಯತ್ನ ಮಾಡಿದ ನಂತರ ಈಗ ಬೀದರ್‌ನಲ್ಲೂ ಎಟಿಎಂ ಕಳವಿಗೆ ವಿಫಲ ಯತ್ನ ನಡೆದಿದೆ.