ಬೀದರ್: ಜಿಲ್ಲೆಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇಂದು ಒಂದೇ ದಿನ 42 ಜನರಲ್ಲಿ ಸೋಂಕು ದೃಢವಾಗಿದ್ದು 80 ಜನ ಸೋಂಕಿತರು ಗುಣಮುಖರಾಗಿದ್ದಾರೆ.
ಔರಾದ್ -6, ಬಸವಕಲ್ಯಾಣ-01, ಭಾಲ್ಕಿ-12, ಬೀದರ್-11, ಹುಮನಾಬಾದ್-11 ಹಾಗೂ ಅನ್ಯರಾಜ್ಯದ ಒಬ್ಬರಿಗೆ ಸೋಂಕು ತಗುಲಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,896 ಕ್ಕೆ ಏರಿಕೆಯಾಗಿದೆ.
ಇಂದು ಆಸ್ಪತ್ರೆಯಿಂದ ಗುಣಮುಖರಾಗಿ 80 ಜನರು ಮನೆಗೆ ವಾಪಸ್ಸಾಗಿದ್ದು ಒಟ್ಟು 1,316 ಜನರು ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 69 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.