ETV Bharat / state

Court Recruitment: ಬೀದರ್​ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಸ್ಟೆನೋಗ್ರಾಫರ್​ ಹುದ್ದೆ - ಶೀಘ್ರ ಲಿಪಿಗಾರ ಹುದ್ದೆಗೆ ಭರ್ತಿಗೆ ಅಧಿಸೂಚನೆ

ಈ ಹುದ್ದೆ ಕುರಿತ ಮಾಹಿತಿ, ಅರ್ಜಿ ಸಲ್ಲಿಕೆ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

Bidar Court Recruitment for Stenographer post

author img

By ETV Bharat Karnataka Team

Published : Nov 8, 2023, 12:35 PM IST

ಬೀದರ್​ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರ ಲಿಪಿಗಾರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಉಳಿಕೆ ಮತ್ತು ಕಲ್ಯಾಣ ಕರ್ನಾಟಕ ವೃಂದದಿಂದ ಈ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 9 ಹುದ್ದೆಗಳ ಭರ್ತಿ ನಡೆಯಲಿದ್ದು, ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಬೀದರ್​ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 9 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಲ್ಯಾಣ ಕರ್ನಾಟಕ ವೃಂದದಿಂದ 5 ಹುದ್ದೆ ಖಾಲಿ ಇದ್ದು, ಉಳಿಕೆ ವೃಂದದಿಂದ 4 ಹುದ್ದೆಗಳ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಇಂಗ್ಲಿಷ್​​ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರ ಲಿಪಿ ಮತ್ತು ಬೆರಳಚ್ಚು ಅರ್ಹತೆ ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವೇತನ: ಈ ಹುದ್ದೆಗಳಿಗೆ ಮಾಸಿಕ 27,650-52,650 ರೂ. ವೇತನ ನಿಗದಿಸಲಾಗಿದೆ.

ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷದ ವಯೋಮಿತಿ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ನಿಗದಿಸಲಾಗಿದ್ದು, ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಸಲಾಗಿದ್ದು, ಅರ್ಜಿ ಶುಲ್ಕವನ್ನು ಆನ್​ಲೈನ್​ ಮೂಲಕ ಸಲ್ಲಿಕೆ ಮಾಡಬಹುದಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕಂಪ್ಯೂಟರ್​​/ ಬೆರಳಚ್ಚು ಯಂತ್ರ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ನವೆಂಬರ್​ 7ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್​​ 6 ಆಗಿದೆ. ಈ ಹುದ್ದೆ ಕುರಿತ ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ bidar.dcourts.gov.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: Court Jobs: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ.. ಟೈಪಿಸ್ಟ್​, ಜವಾನ ಹುದ್ದೆಗಳ ಭರ್ತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.